ಸಿನಿಮಾ ಪತ್ರಕರ್ತರ ಹೆಮ್ಮೆಯ ವೇದಿಕೆಯಾದ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ’ಯ 7ನೇ ವರ್ಷದ ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರು ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಅತ್ಯಂತ ಅದ್ಧೂರಿಯಾಗಿ ಜರುಗಿತು. 2025ನೇ ಸಾಲಿನಲ್ಲಿ ಬಿಡುಗಡೆಯಾದ ಸಿನಿಮಾಗಳ ಪೈಕಿ ಅತ್ಯುತ್ತಮ ಪ್ರತಿಭೆಗಳನ್ನು ಗುರುತಿಸಿ, ಒಟ್ಟು 26 ವಿವಿಧ ವಿಭಾಗಗಳಲ್ಲಿ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಬಾರಿಯ ಪ್ರಶಸ್ತಿ ಹಬ್ಬದಲ್ಲಿ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿದ ‘ಕಾಂತಾರ ಚಾಪ್ಟರ್-1’ ಚಿತ್ರವು ಅಕ್ಷರಶಃ ಪಾರಮ್ಯ ಮೆರೆದಿದೆ. ಒಟ್ಟು 9 ವಿಭಾಗಗಳಲ್ಲಿ ಪ್ರಶಸ್ತಿ ಗೆದ್ದುಕೊಂಡ ಈ ಸಿನಿಮಾ, 2025ರ ಸಾಲಿನ ‘ಅತ್ಯುತ್ತಮ ಚಿತ್ರ’ ಗೌರವಕ್ಕೆ ಪಾತ್ರವಾಯಿತು. ರಿಷಬ್ ಶೆಟ್ಟಿ ಅವರು ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ನಿರ್ದೇಶಕ ಸೇರಿದಂತೆ ಒಟ್ಟು ಮೂರು ಟ್ರೋಫಿಗಳನ್ನು ಮುಡಿಗೇರಿಸಿಕೊಂಡಿದ್ದು ವಿಶೇಷವಾಗಿತ್ತು. ಇನ್ನು, ‘ಗತ ವೈಭವ’ ಚಿತ್ರದ ಮನೋಜ್ಞ ನಟನೆಗಾಗಿ ಆಶಿಕಾ ರಂಗನಾಥ್ ಅವರು ‘ಅತ್ಯುತ್ತಮ ನಟಿ’ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು.
ಕನ್ನಡ ಚಿತ್ರರಂಗದ ಹಿರಿಯ ಹಾಗೂ ದಿಗ್ಗಜ ನಿರ್ದೇಶಕರಾದ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಅವರಿಗೆ ‘ಜೀವಮಾನ ಸಾಧನೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರೊಂದಿಗೆ, ಕನ್ನಡದ ಮೊದಲ ಟಾಕಿ ಚಿತ್ರದ ನಾಯಕ ಸುಬ್ಬಯ್ಯ ನಾಯ್ಡು ಅವರ ಮರಿಮೊಮ್ಮಗ ಸುಕ್ರತ್ ಸೃಜನ್ ಲೋಕೇಶ್ ಅವರಿಗೆ ವಿಶೇಷ ಗೌರವ ಪ್ರದಾನ ಮಾಡಲಾಯಿತು.
ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಗಿರೀಶ್ ಕಾಸರವಳ್ಳಿ, ಹಿರಿಯ ನಟಿ ತಾರಾ ಅನುರಾಧ, ಖ್ಯಾತ ನಿರ್ಮಾಪಕ ರಾಕ್ಲೈನ್ ವೆಂಕಟೇಶ್, ನಿರ್ದೇಶಕ ಬಿ. ಸುರೇಶ್, ಹಿರಿಯ ನಟಿ ಗಿರಿಜಾ ಲೋಕೇಶ್ ಹಾಗೂ ಪೂಜಾ ಗಾಂಧಿ ಅವರು ಜಂಟಿಯಾಗಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಶ್ವಿನಿ ಗೌಡ, ಮಾಸ್ಟರ್ ಮಂಜುನಾಥ್ ಹಾಗೂ ಪ್ರಾಯೋಜಕ ಸಂಸ್ಥೆಗಳಾದ ಅಂಬಸ್ಟೋನ್ ಪ್ರಾಪರ್ಟೀಸ್ನ ಯಶ್ವಂತ್ ಕುಮಾರ್ ಮತ್ತು ಅಶ್ವಸೂರ್ಯ ರಿಯಾಲಿಟಿಸ್ನ ಎಸ್. ರಂಜಿತ್ ಕುಮಾರ್ ಸೇರಿದಂತೆ ಹಲವು ಗಣ್ಯರು ಈ ವರ್ಣರಂಜಿತ ಸಂಜೆ ಸಾಕ್ಷಿಯಾದರು.
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ 2025ನೇ ಸಾಲಿನ ಪ್ರಶಸ್ತಿ ವಿಜೇತರು:
1. ಅತ್ಯುತ್ತಮ ಚೊಚ್ಚಲ ನಿರ್ಮಾಪಕ: ನಿವೇದಿತಾ ಶಿವರಾಜ್ ಕುಮಾರ್ (ಫೈರ್ ಪ್ಲೈ)
2. ಅತ್ಯುತ್ತಮ ಚೊಚ್ಚಲ ಬರಹಗಾರ: ಸುಮಂತ್ ಭಟ್ ( ಮಿಥ್ಯ)
3. ಅತ್ಯುತ್ತಮ ಚೊಚ್ಚಲ ಸಿನಿಮಾ ನಿರ್ದೇಶನ : ಭೀಮರಾವ್ ಪಿ (ಹೆಬ್ಬುಲಿ ಕಟ್)’
4. ಅತ್ಯುತ್ತಮ ಚೊಚ್ಚಲ ನಟಿ: ಪ್ರಿಯಾಂಕಾ ಆಚಾರ್ಯ ( ಏಳುಮಲೆ)
5. ಅತ್ಯುತ್ತಮ ಚೊಚ್ಚಲ ನಟ: ಕಿರಿಟಿ (ಜ್ಯೂನಿಯರ್) ಹಾಗೂ ದುಷ್ಯಂತ್ (ಗತ ವೈಭವ)
6. ಅತ್ಯುತ್ತಮ ಬಾಲ ನಟ: ಅತೀಶ್ ಶೆಟ್ಟಿ (ಮಿಥ್ಯ)
7. ಅತ್ಯುತ್ತಮ ವಿಎಫೆಕ್ಸ್: ಕೆ.ವಿ ಸಂಜಿತ್ (ಕಾಂತಾರ ಚಾಪ್ಟರ್ 1)
8. ಅತ್ಯುತ್ತಮ ಕಲಾ ನಿರ್ದೇಶನ: ಬೆಂಗಲನ್ ಮತ್ತು ಧರಣಿ ಗಂಗಾಪುತ್ರ (ಕಾಂತಾರ ಚಾಪ್ಟರ್ 1)9. ಅತ್ಯುತ್ತಮ ಸಾಹಸ ನಿರ್ದೇಶನ: ಅರ್ಜುನ್ ರಾಜ್ ( ಕಾಂತಾರ ಚಾಪ್ಟರ್ 1)
10. ಅತ್ಯುತ್ತಮ ಸಂಕಲನ: ಕೆ.ಎಂ ಪ್ರಕಾಶ್ (ಏಳುಮಲೆ)
11. ಅತ್ಯುತ್ತಮ ಸಂಭಾಷಣೆ: ಜೆ.ಪಿ ತುಮಿನಾಡು (ಸು ಫ್ರಂ ಸೋ)
12. ಅತ್ಯುತ್ತಮ ಸಿನಿಮಾಟೋಗ್ರಫಿ: ಅರವಿಂದ್ ಕಶ್ಯಪ್ (ಕಾಂತಾರ ಚಾಪ್ಟರ್ 1)
13. ಅತ್ಯುತ್ತಮ ನೃತ್ಯ ನಿರ್ದೇಶನ: ವಿನಾಯಕ ಆಚಾರ್ಯ ( ಸು ಫ್ರಂ ಸೋ)
14. ಅತ್ಯುತ್ತಮ ಗಾಯಕ: ಅಬ್ಬಿ ವಿ (ಕಾಂತಾರ ಚಾಪ್ಟರ್ 1)
15. ಅತ್ಯುತ್ತಮ ಗಾಯಕಿ: ಸಾನ್ವಿ ಸುದೀಪ್ (ಮಾರ್ಕ್)
16. ಅತ್ಯುತ್ತಮ ಚಿತ್ರ ಸಾಹಿತ್ಯ: ಸಿಂಪಲ್ ಸುನಿ (ಗತ ವೈಭವ)
17. ಅತ್ಯುತ್ತಮ ಹಿನ್ನೆಲೆ ಸಂಗೀತ: ಸಂದೀಪ್ ತುಳಸಿದಾಸ್ (ಸು ಫ್ರಂ ಸೋ)
18. ಅತ್ಯುತ್ತಮ ಸಂಗೀತ: ಅಜನೀಶ್ ಲೋಕನಾಥ್ (ಕಾಂತಾರ ಚಾಪ್ಟರ್ 1)
19. ಅತ್ಯುತ್ತಮ ಚಿತ್ರಕಥೆ: ಪುನೀತ್ ರಂಗಸ್ವಾಮಿ ( ಏಳು ಮಲೆ)
20. ಅತ್ಯುತ್ತಮ ಸಹ ನಟಿ: ಸಂಧ್ಯಾ ಅರಕೆರೆ ( ಸು ಫ್ರಂ ಸೋ)
21. ಅತ್ಯುತ್ತಮ ಸಹ ನಟ: ಮಹಾಂತೇಶ್ ಹಿರೇಮಠ (ಹೆಬ್ಬುಲಿ ಕಟ್)
22. ಅತ್ಯುತ್ತಮ ನಿರ್ದೇಶಕ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್ 1)
23. ಅತ್ಯುತ್ತಮ ನಟಿ: ಆಶಿಕಾ ರಂಗನಾಥ್ ( ಗತ ವೈಭವ)
24. ಅತ್ಯುತ್ತಮ ನಟ: ರಿಷಬ್ ಶೆಟ್ಟಿ (ಕಾಂತಾರ ಚಾಪ್ಟರ್
25. ಅತ್ಯುತ್ತಮ ಚಿತ್ರ: ಕಾಂತಾರ ಚಾಪ್ಟರ್ 1
26. ಜೀವಮಾನ ಸಾಧನೆ ಪ್ರಶಸ್ತಿ: ಎಸ್.ವಿ.ರಾಜೇಂದ್ರ ಸಿಂಗ್ ಬಾಬು