Connect with us

KARNATAKA

ಕಾಂತಾರ ಸಿನಿಮಾದ ಪೋಸ್ಟರ್ ಮೇಲೆ ಅಶ್ಲೀಲ ಬರಹ ಬರೆದ ಕಿಡಿಗೇಡಿಗಳು…!!

ಶಿವಮೊಗ್ಗ ಅಕ್ಟೋಬರ್ 7: ಇಡೀ ದೇಶವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಕಾಂತಾರ ಸಿನೆಮಾ ಇದೀಗ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಕೆಲ ಕಿಡಿಗೇಡಿಗಳು ಕಾಂತಾರ ಚಿತ್ರದ ಪೋಸ್ಟರ ಮೇಲೆ ಅಶ್ಲೀಲ ಪದ ಬರೆದಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.


ಶಿವಮೊಗ್ಗದ ಮಹಾವೀರ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಾಂತಾರ ಸಿನಿಮಾ ಪೋಸ್ಟರ್ ಮೇಲೆ ‘F * * K YOU G * D’ ಅಂತಾ ಕಿಡಿಗೇಡಿಗಳು ಬರೆದಿದ್ದು, ಪೋಸ್ಟರ್ ಮೇಲೆ ಪೆನ್ನಿನಿಂದ ಈ ಬರಹವನ್ನು ಬರೆಯಲಾಗಿದೆ. ಕಾಂತಾರ ಸಿನಿಮಾ ಪೋಸ್ಟರ್ ನೋಡಿ ಕೆಲ ವಿಕೃತ ಮನಸ್ಸಿನವರು ಪೋಸ್ಟರ್ ಮೇಲೆ ವಿಕೃತ ಬರಹವನ್ನೇ ಬರೆದಿದ್ದಾರೆ. ದೇವರಿಗೆ ಅವಹೇಳನ ಮಾಡುವಂತಹ ಪದ ಬಳಕೆ ಮಾಡಿದ್ದಾರೆ.


ಈ ಬರಹವುಳ್ಳ ಪೋಸ್ಟರ್ ನೋಡಿದ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಜಯನಗರ ಠಾಣೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದು, ತಕ್ಷಣವೇ ಅವಹೇಳನಕಾರಿ ಬರಹ ತೆಗೆಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *