LATEST NEWS
ನಿಯಂತ್ರಣ ತಪ್ಪಿ ಡಿವೈಡರ್ ಡಿಕ್ಕಿ ಹೊಡೆದ ಕಾರು ಮೂವರು ಗಂಭೀರ
ಉಡುಪಿ ಸೆಪ್ಟೆಂಬರ್ 11 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಡಿವೈಡರ್ ಮೇಲಿನ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಐದು ಮಂದಿ ಗಾಯಗೊಂಡ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ 66ರ ಕಾಪುವಿನಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಕಾರು ಕಾಪು ಹಳೇ ಮೆಸ್ಕಾಂ ಕಛೇರಿ ಬಳಿ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬ ಉರುಳಿ ಬಿದ್ದಿದೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದ್ದು, ಕಾರಿನಲ್ಲಿದ್ದ ಐದು ಮಂದಿಯ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.