LATEST NEWS
ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್ – ಪಾದಚಾರಿ ಸ್ಥಳದಲ್ಲೇ ಸಾವು

ಕಾಪು ಜನವರಿ 1 : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಖಾಸಗಿ ಬಸ್ ಒಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ಬಳಿ ನಡೆದಿದೆ.
ಮೃತರನ್ನು ಮೂಳೂರು ಬೀಚ್ ಬಳಿಯ ನಿವಾಸಿ ರಮೇಶ್ ಬಂಗೇರ 65) ಎಂದು ಗುರುತಿಸಲಾಗಿದೆ. ಇವರು ಮೂಳೂರು ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಸಂದರ್ಭ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಎಕ್ಸ್ಪ್ರೆಸ್ ಬಸ್ ಢಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ರಮೇಶ್ ಬಂಗೇರ ಅವರ ದೇಹ ಛಿದ್ರ ಛಿದ್ರವಾಗಿ ಹೋಗಿದ್ದು, ದೇಹದ ಭಾಗಗಳು ರಸ್ತೆಯಲ್ಲಿ ಚೆಲ್ಲಲ್ಪಟ್ಟಿತ್ತು. ಸ್ಥಳಕ್ಕೆ ಕಾಪು ಪೊಲೀಸರು ಆಗಮಿಸಿ ರಸ್ತೆ ಸಂಚಾರ ಸುಗಮಗೊಳಿಸಿದರು.