LATEST NEWS
ಕಾಪು – ಕೊರೊನಾದಿಂದ ವ್ಯಕ್ತಿ ಮೃತ್ಯು – ತಹಶೀಲ್ದಾರ್ ಅವರಿಂದ ಪರಿಶೀಲನೆ

ಉಡುಪಿ ಜೂನ್ 03: ತೀವ್ರ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಅವರಿಗೆ ಕೊರೊನಾ ದೃಢಪಟ್ಟಿದೆ.
ಬೆಳ್ಳೆ ಗ್ರಾಮದ ಪೀಟರ್ ಮಥಾಯಸ್(65) ಎಂಬವರು ಕರುಳಿನ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಮೇ 29ರಂದು ಹೈಪರ್ ಟೆನ್ಷನ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಕೋವಿಡ್ ಟೆಸ್ಟ್ ಮಾಡಿದಾಗ ಕೋರೋನ ದೃಢಪಟ್ಟಿತ್ತು. ಇವರು ಚಿಕಿತ್ಸೆ ಫಲಕಾರಿಯಾಗದೆ ಜೂ.2ರಂದು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇವರಿಗೆ ಕೋವಿಡ್ ಪಾಸಿಟಿವ್ ಇರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕಾಪು ತಹಶೀಲ್ದಾರ್ ಪ್ರತಿಭಾ ಆರ್. ಇಂದು ಮೃತರ ಮನೆಗೆ ಭೇಟಿ ನೀಡಿ ಮನೆಯವರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಮನೆಯ ಇತರ ಯಾರಿಗೂ ಕೋವಿಡ್ ಲಕ್ಷಣಗಳು ಇರುವುದಿಲ್ಲ. ಮೃತದೇಹವನ್ನು ಆಸ್ಪತ್ರೆಯಲ್ಲಿಯೇ ಇರಿಸಲಾಗಿದೆ. ಬುಧವಾರ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸಿ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.