LATEST NEWS
ಕಾಪು – ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕಾಪು ಜುಲೈ 17: ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಒರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕಟಪಾಡಿಯಲ್ಲಿ ನಡೆದಿದೆ. ಮೃತ ಕಾರ್ಮಿಕನ್ನು ಒಡಿಶಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಕೆಲಸದ ವಿಷಯದಲ್ಲಿ ಇಬ್ಬರ ನಡುವೆ ಮಾತುಕತೆ, ಜಗಳ ನಡೆದಿದ್ದು ಬಳಿಕ ಇಬ್ಬರೂ ಹೊಡೆದಾಟ ನಡೆಸಿದ್ದರು. ಈ ವೇಳೆ ಗಣೇಶ್ ಗಂಭೀರ ಗಾಯಗೊಂಡಿದ್ದು ಸ್ಥಳೀಯರು ಮತ್ತು ಸಹಕಾರ್ಮಿಕರು ಆಸ್ಪತ್ರೆಗೆ ಕರೆದೊಯ್ದಿದ್ದು ಅಷ್ಟರಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
You must be logged in to post a comment Login