Connect with us

    LATEST NEWS

    ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ರಂಗಕರ್ಮಿ,ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ದಂಪತಿ

    ಕಾಪು ಡಿಸೆಂಬರ್ 13: ಕಾಪುವಿನ ಹೆಸರಾಂತ ಸಮಾಜ ಸೇವಕ, ಕಾಪು ರಂಗತರಂಗ ನಾಟಕ ಸಂಸ್ಥೆಯ ಸ್ಥಾಪಕ ಕೆ.ಲೀಲಾಧರ ಶೆಟ್ಟಿ(68) ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ(58) ದಂಪತಿ ಜೊತೆಯಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಮಧ್ಯರಾತ್ರಿ ನಡೆದಿದೆ.


    ಸರಳ ಸಜ್ಜನ ವ್ಯಕ್ತಿತ್ವದ ಲೀಲಾಧರ ಶೆಟ್ಟಿ ಒಮ್ಮೆ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.‌ ಅತ್ಯುತ್ತಮ ನಾಟಕ ತಂಡ ಹೊಂದಿದ್ದರು. ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಈ ದಂಪತಿ ಮಂಗಳವಾರ ಮಧ್ಯರಾತ್ರಿ ತಮ್ಮ ಮನೆಯ ಪಕ್ಕಾಸಿಗೆ ಒಂದೇ ಸೀರೆಯನ್ನು ಬಿಗಿದು, ಅದರ ಎರಡೂ ತುದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಒಂದು ಬಾರಿ ಕಾಪು ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಇವರು, ಮಜೂರು ಗ್ರಾಮ ಪಂಚಾಯತ್ ನಲ್ಲಿ ಒಂದು ಸಲ ಅಧ್ಯಕ್ಷರಾಗಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.


    ಕಾಪು ತಾಲೂಕು ರಚನೆಯಾಗಬೇಕು ಎಂದು ಹೋರಾಟ ಸಮಿತಿ ರಚಿಸಿ ಸಮಿತಿಯ ಅಧ್ಯಕ್ಷರಾಗಿ ಹೆಜನಾಡಿಯಿಂದ ಉದ್ಯಾವರದ ವರೆಗೆ ಪಾದಯಾತ್ರೆ ನಡೆಸಿದ್ದರು. ಇತ್ತೀಚೆಗೆ ತನ್ನ ಹೊಸ ನಾಟಕ ರಚನೆಯನ್ನು ಮಾಡಿದ್ದ ಇವರು ಅದರಲ್ಲಿ ಯಶಸ್ವಿಯಾಗುವ ಆಶಾಭಾವನೆ ಹೊಂದಿದ್ದರು. ಈ ದಂಪತಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

    ಸಂಸದ ನಳಿನ್‌ಕುಮಾರ್ ಕಟೀಲ್ ಸಂತಾಪ :

    ಸಮಾಜ ಸೇವಕ ಕಾಪು ಲೀಲಾಧರ ಶೆಟ್ಟಿ ಅವರ ನಿಧನಕ್ಕೆ ಸಂಸದ ನಳಿನ್‌ಕುಮಾರ್ ಕಟೀಲ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ. ಸಮಾಜ ಸೇವೆ ಹಾಗೂ ರಂಗಭೂಮಿಗೆ ತನ್ನನ್ನು ಸಮರ್ಪಿಸಿಕೊಂಡಿದ್ದ ಲೀಲಾಧರ ಶೆಟ್ಟಿ ಅವರು ಕಾಪು ಪರಿಸರದಲ್ಲಿ ಎಲ್ಲ ವರ್ಗದ ಜನತೆಯ ಪ್ರೀತಿಗೆ ಪಾತ್ರರಾಗಿದ್ದರು. ಅಶಕ್ತರಿಗೆ ಸದಾ ನೆರವಾಗುತ್ತಿದ್ದ ಕಾಪು ಲೀಲಾಧರ ಶೆಟ್ಟಿ ಅವರ ಅಗಲುವಿಕೆ ಅತೀವ ನೋವು ತಂದಿದೆ ಎಂದು ಸಂಸದರು ಸಂತಾಪ ಸಲ್ಲಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply