LATEST NEWS
ಕಾಪು – ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್

ಕಾಪು ಮೇ 26: ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಉಳಿಯಾರಗೋಳಿಯಲ್ಲಿ ನಡೆದಿದೆ.
ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಮತ್ತೊಂದು ಬಸ್ ನ್ನು ಓವರ್ ಟೆಕ್ ಮಾಡುವ ಭರಾಟೆಯಲ್ಲಿ ಬಂದಿದ್ದು ಮಳೆಯ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯರು ಅವರನ್ನು ಬಸ್ಸಿನಿಂದ ಹೊರಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳುಗಳನ್ನು ಉಡುಪಿ ಮತ್ತು ಕಾಪುವಿನ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

1 Comment