Connect with us

    LATEST NEWS

    ಕಾಪು – ಉರುಳಿ ಬಿದ್ದ ಆಲದ ಮರ – ಓರ್ವ ಕಾರ್ಮಿಕ ಸಾವು ಇಬ್ಬರಿಗೆ ಗಂಭೀರ ಗಾಯ

    ಉಡುಪಿ ಅಕ್ಟೋಬರ್ 02: ಆಲದ ಮರವನ್ನು ತೆರವುಗೊಳಿಸುವ ಸಂದರ್ಭ ಮರ ಉರುಳಿ ಬಿದ್ದು, ಓರ್ವ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮಜೂರು ಗ್ರಾಮದ ಕರಂದಾಡಿಯಲ್ಲಿ ನಡೆದಿದೆ.
    ಮೃತನನ್ನು ಬಿಹಾರ ಜಾರ್ಖಂಡ್ ಮೂಲದ ಸುಧೀರ್ ಪಾಂಜೆ ಎಂದು ಗುರುತಿಸಲಾಗಿದೆ.


    ಕರಂದಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿಯ ಖಾಸಗಿಯವರಿಗೆ ಸೇರಿದ ನಾಗಬನ ಮತ್ತು ಮನೆ ಮೇಲೆ ಅಪಾಯಕಾರಿಯಾಗಿ ವಾಲಿದ್ದ ಗೋಳಿ ಮರವನ್ನು ಕಡಿಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಡಿದ ಮರ ಉರುಳಿಬಿದ್ದಾಗ ಅದರಡಿ ಮೂವರು ಕಾರ್ಮಿಕರು ಮರದಡಿಗೆ ಸಿಲುಕಿಕೊಂಡಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರನ್ನು ರಕ್ಷಣೆ ಮಾಡಿ ಉಡುಪಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply