Connect with us

    LATEST NEWS

    ಕಾರ್ಕಳ – ಬೈಕ್ ಢಿಕ್ಕಿಯಾಗಿ ವಿದ್ಯಾರ್ಥಿನಿ ಮೃತ್ಯು

    ಕಾರ್ಕಳ ಜೂನ್ 23 : ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವ ವೇಳೆ ಬೈಕ್ ಡಿಕ್ಕಿ ಹೊಡೆದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಜೂನ್ 22ರಂದು ರಾತ್ರಿ ನಂದಳಿಕೆಯಲ್ಲಿ ಸಂಭವಿಸಿದೆ.‌


    ಕೆದಿಂಜೆ ದಡ್ಡು ನಿವಾಸಿ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಣಮ್ಯ (14) ಮೃತ ದುರ್ದೈವಿ. ಶನಿವಾರ ರಾತ್ರಿ ಸುಮಾರು 7 ಗಂಟೆಗೆ ಲಕ್ಷ್ಮೀ ಜನಾರ್ದನ ದೇವಸ್ಥಾನಕ್ಕೆ ಹುಣ್ಣಿಮೆ ಪೂಜೆಗೆಂದು ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಬೈಕ್ ಹೊಡೆದಿದೆ.‌ ಪರಿಣಾಮವಾಗಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪ್ರಣಮ್ಯ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply