Connect with us

    LATEST NEWS

    ಕಾರ್ಕಳ – ಖಾಸಗಿ ಬಸ್ ಜೀಪ್ ನಡುವೆ ಭೀಕರ ರಸ್ತೆ ಅಪಘಾತ – ಹಲವರಿಗೆ ಗಂಭೀರ ಗಾಯ

    ಕಾರ್ಕಳ ಡಿಸೆಂಬರ್ 10 : ಖಾಸಗಿ ಬಸ್ ಹಾಗೂ ಜೀಪ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ಪಡುಬಿದ್ರಿ ರಾಜ್ಯ ಹೆದ್ದಾರಿಯ ನಿಟ್ಟೆ ಮಂಜಲ್ಪಾಕೆ ಎಂಬಲ್ಲಿ ನಡೆದಿದೆ.
    ಮೂಡುಬಿದಿರೆಯಿಂದ ಕಾರ್ಕಳವಾಗಿ ಪಡುಬಿದ್ರಿ ಮಾರ್ಗವಾಗಿ ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮಹೇಂದ್ರ ಜೀಪು ಡಿಕ್ಕಿ ಹೊಡೆದಿದೆ.

    ಓವರ್ ಟೇಕ್ ಮಾಡುವ ಸಂದರ್ಭ ಘಟನೆ ಸಂಭವಿಸಿದ್ದು, ಜೀಪಿನಲ್ಲಿದ್ದ ಹಲವರಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡಿದ್ದ ಓರ್ವ ಗಾಯಾಳು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಜೀಪಿನಲ್ಲಿದ್ದವರು ಸ್ಥಳಿಯ ದೈವದ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸ್ಸಾಗುತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು 108 ಆಂಬುಲೆನ್ಸ್‌ ನಲ್ಲಿ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ‌ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply