LATEST NEWS
ಕಾರ್ಕಳ – ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ವಿಡಿಯೋ

ಕಾರ್ಕಳ ಜೂನ್ 25: ಖಾಸಗಿ ಬಸ್ ಮತ್ತು ಕಾರಿನ ನಡುವೆ ಭೀಕರ ರಸ್ತೆ ಅಪಘಾತ ನಡೆದಿದ್ದು, ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾದ ಘಟನೆ ಕಾರ್ಕಳದ ಅತ್ತೂರಿನ ದೂಪದಕಟ್ಟೆ ಬಳಿ ಜೂನ್ 24 ರ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಖಾಸಗಿ ಬಸ್ ಮಂಗಳೂರಿನಿಂದ ಕಾರ್ಕಳ ಕಡೆಗೆ ಪ್ರಯಾಣಿಸುತ್ತಿತ್ತು, ಆದರೆ ಬಿಎಂಡಬ್ಲ್ಯೂ ವಿರುದ್ಧ ದಿಕ್ಕಿನಿಂದ ಬರುತ್ತಿತ್ತು. ಕಾರ್ಕಳ-ಪಡುಬಿದ್ರಿ ಹೆದ್ದಾರಿಯ ದೂಪದಕಟ್ಟೆ ಜಂಕ್ಷನ್ ಬಳಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆ ಎಷ್ಟು ಹೆಚ್ಚಾಗಿತ್ತೆಂದರೆ ಬಿಎಂಡಬ್ಲ್ಯೂ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಇಡೀ ಘಟನೆಯ ದೃಶ್ಯಗಳು ಹತ್ತಿರದ ವಾಹನದ ಡ್ಯಾಶ್ಕ್ಯಾಮ್ನಲ್ಲಿ ಸೆರೆಯಾಗಿದ್ದು, ಆ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.ಕಾರ್ಕಳ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ನಿಭಾಯಿಸಿ, ರಸ್ತೆಯನ್ನು ಸಾಮಾನ್ಯ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರಕರಣ ದಾಖಲಾಗಿದೆ.