Connect with us

    LATEST NEWS

    ಕಾರ್ಕಳ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಪೋಸ್ಟ್ ಮಾರ್ಟಂ ಸಂಪೂರ್ಣ

    ಕಾರ್ಕಳ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಪೋಸ್ಟ್ ಮಾರ್ಟಂ ಸಂಪೂರ್ಣ

    ಉಡುಪಿ ಫೆಬ್ರವರಿ 16: ನಿನ್ನೆ ರಾತ್ರಿ ಕಾರ್ಕಳ ತಾಲೂಕಿನ ಎಸ್.ಕೆ ಬಾರ್ಡರ್ ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಮೈಸೂರಿನಿಂದ ಪ್ರವಾಸ ಬಂದಿದ್ದ ಒಂಬತ್ತು ಮಂದಿ ಬಲಿಯಾಗಿದ್ದಾರೆ. ಅಪಘಾತದಲ್ಲಿ 25 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಅನಜ್ಞಾ, ರಂಜಿತಾ ಪಿ, ಯೋಗೇಂದ್ರ, ರಾಧಾ ರವಿ, ವಿನುತಾ, ಪ್ರೀತಂ ಗೌಡ, ಅಡುಗೆ ಸಹಾಯಕ ಬಸವರಾಜ್, ಬಸ್ ಚಾಲಕ ಮಾರುತಿ ಎಂದು ಗುರುತಿಸಲಾಗಿದೆ.

    ಇಂದು ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಮೃತರ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಏಳು ಮಂದಿಯ ಪೋಸ್ಟ್ ಮಾರ್ಟಂ ಪ್ರಕ್ರಿಯೆ ಪೂರ್ಣಗೊಂಡಿದೆ. ಮೃತ ದೇಹವನ್ನು ಮೈಸೂರಿಗೆ ಕಳುಹಿಸಿ ಕೊಡಲಾಗಿದೆ.ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದು, ಅಪಘಾತ ಅವರನ್ನು ಶಾಕ್ ನಲ್ಲಿ ದೂಡಿದೆ.

    ಕರಾವಳಿ ಭಾಗದಲ್ಲಿ ಇತ್ತೀಚಿನ ವರ್ಷಗಳಲ್ಲಿ ನಡೆದ ಭೀಕರ ಅಪಘಾತವಿದು. ನಂಜನಗೂಡಿನ ವೈಟಲ್ ರೆಕಾರ್ಡ್ ಕಂಪನಿಯಲ್ಲಿ ಡಾಟಾ ಎಂಟ್ರಿ ಕೆಲಸ ಮಾಡುತ್ತಿದ್ದ ಯುವಕರ ತಂಡವಿದು. ಪ್ರವಾಸದ ಸಂತೋಷದಲ್ಲಿದ್ದ ನಮಗೆ ಈ ಅಪಘಾತ ಬರಸಿಡಿಲಿನಂತೆ ಹೊಡೆದಿದೆ.

    ಬಸ್ಸಿನಲ್ಲಿ ಮೋಜು-ಮಸ್ತಿ ಮಾಡಿಕೊಂಡು ಅಂತ್ಯಾಕ್ಷರಿ ಹಾಡುತ್ತಾ ನಾವು ಖುಷಿಖುಷಿಯಾಗಿ ಬರುತ್ತಿದ್ದೆವು. ಗೌಜು ಗಲಾಟೆ ತಾರಕಕ್ಕೇರಿದಾಗ ಚಾಲಕನ ಗಮನ ಬೇರೆಡೆಗೆ ಹೋಗಿದೆ. ಇದರಿಂದ ಅಪಘಾತ ಸಂಭವಿಸಿದೆ ಎಂದು ಗಾಯಾಳು ದೀಪಿಕಾ ಮತ್ತು ದಿವ್ಯಶ್ರೀ ತಿಳಿಸಿದ್ದಾರೆ.
    ಶನಿವಾರ ಸಂಜೆ 5.30ಕ್ಕೆ ಖಾಸಗಿ ಮಿನಿ ಬಸ್ ಘಾಟಿಯಿಂದಿಳಿದು ಬರುತ್ತಿದ್ದಾಗ ಎಡಗಡೆಯ ತಡೆಗೋಡೆಗೆ ಗುದ್ದಿದೆ.

    ಘಾಟಿಯ ರಸ್ತೆ ಅತಿ ಕಿರಿದಾಗಿದ್ದರಿಂದ ಮುಂದೆ ವಾಹನ ಬಂದಾಗ ಬಲಕ್ಕೆ ತಿರುವು ತೆಗೆದುಕೊಳ್ಳುವಾಗ ಆ್ಯಕ್ಸೆಲ್ ಕಟ್ ಆಗಿದ್ದರಿಂದ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ 9 ಮಂದಿ ಸ್ಥಳದಲ್ಲೇ ಮೃತರಾಗಿದ್ದಾರೆ. ಘಟನೆಯಲ್ಲಿ 25 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಾರ್ಕಳದ ಸಿಟಿ ಆಸ್ಪತ್ರೆ, ಸರಕಾರಿ ಆಸ್ಪತ್ರೆ, ಮಣಿಪಾಲದ ಕೆಎಂಸಿಗೆ ದಾಖಲಿಸಲಾಗಿದೆ ಎಂದು ಎಸ್‍ಪಿ ವಿಷ್ಣುವರ್ಧನ್ ತಿಳಿಸಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply