KARNATAKA
Karkala Gang Rape: ಆರೋಪಿ ಅಭಯ್ ಪೊಲೀಸ್ ಕಸ್ಟಡಿಗೆ,ಬಂಧಿತ ಅಭಯ್ ಬಿಜೆಪಿ ಕಾರ್ಯಕರ್ತ..!!?
ಕಾರ್ಕಳ , ಆಗಸ್ಟ್ 27 : ಕಾರ್ಕಳ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ಬಂಧಿಸಲ್ಪಟ್ಟ ಕಾರ್ಕಳದ ಕೋರ್ಟ್ ರಸ್ತೆಯ ಅಭಯ್(23) ನನ್ನು ಮಂಗಳವಾರ ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಕಾರ್ಕಳ ನ್ಯಾಯಾಲಯ ಆತನನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳು ಇದೀಗ ಪೊಲೀಸ್ ಕಸ್ಟಡಿಯಲ್ಲಿದ್ದು, ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು ಈ ಮೂಲಕ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಅಭಯ್ ಬಿಜೆಪಿ ಕಾರ್ಯಕರ್ತ..!!?
ಬಂಧಿತ ಆರೋಪಿ ಅಭಯ್ ಬಿಜೆಪಿ ಕಾರ್ಯಕರ್ತ ಎಂದು ಹೇಳಲಾಗಿದೆ. ಆತನ ಫೇಸ್ ಬುಕ್‌ನ ಕವರ್‌ನಲ್ಲಿ ಶಾಸಕ ಸುನೀಲ್ ಕುಮಾರ್ ಅವರ ಫೋಟೋ ಹಾಕಲಾಗಿದ್ದು, ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ವೈರಲ್ ಆಗುತ್ತಿದೆ.
ಈತ ಕಾಪುವಿನ ವ್ಯಕ್ತಿಯೊಂದಿಗೆ ಸೇರಿಕೊಂಡು ಟಿಪ್ಪರ್ ಖರೀದಿಸಿದ್ದ ಆದರೆ ಲೋನ್ ಕಂತು ಬಾಕಿ ಇರಿಸಿದ್ದ ಕಾರಣ ಆತನ ವಾಹನವನ್ನು ಫೈನಾನ್ಸ್ ಕಂಪೆನಿ ಮುಟ್ಟುಗೋಲು ಹಾಕಿಕೊಂಡ ನಂತರ ಬೆಂಗಳೂರಿನಲ್ಲಿ ಸ್ಪಾ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಅಲ್ತಾಫ್ ಹಾಗೂ ಅಭಯ್ ಇಬ್ಬರೂ ಕಾರ್ಕಳ ಜೋಡುರಸ್ತೆ ಬಳಿ ಟಿಪ್ಪರ್ ನಿಲ್ಲಿಸುತ್ತಿದ್ದರು. ಇದೇ ಸಂದರ್ಭ ಇವರಿಬ್ಬರ ಮಧ್ಯೆ ಸ್ನೇಹ ಬೆಳೆದಿತ್ತು ಎಂದು ತಿಳಿದುಬಂದಿದೆ.
You must be logged in to post a comment Login