ಉಡುಪಿ, ಜನವರಿ 11: ಭಾರೀ ವಿವಾದಕ್ಕೆ ಕಾರಣವಾಗಿರುವ ಕಾರ್ಕಳದ ಉಮಿಕಲ್ ಬೆಟ್ಟದ ಮೇಲಿರುವ ಪರಶುರಾಮ ಥೀಮ್ ಪಾರ್ಕ್ ತಾಮ್ರ ಹೊದಿಕೆ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ಬಂಧಿಸಿದ್ದಾರೆ


ಬಂಧಿತರನ್ನು ಮಂಗಳೂರು ಮೂಲದ ಆರಿಫ್(37) ಮತ್ತು ಅಬ್ದುಲ್ ಹಮೀದ್(32) ಎಂದು ಗುರುತಿಸಲಾಗಿದೆ. ಬಂಧಿತರಿಂದ 45 ಸಾವಿರ ರೂ. ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ, ಎರಡು ಸೀಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ ಗೂಡ್ಸ್ ಆಟೋ, ಬೈಕ್ ವಶಕ್ಕೆ ಪಡೆಯಲಾಗಿದ್ದು, ಇತರೆ ಆರೋಪಿಗಳ ಪತ್ತೆಗೆ ಪೊಲೀಸರಿಂದ ಶೋಧ ಮುಂದುವರಿದಿದೆ.

ಜನವರಿ 3ರಂದು ಘಟನೆ ನಡೆದಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು 3 ತಂಡ ರಚಿಸಿ ತನಿಖೆ ನಡೆಸಿದ್ದರು. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೋಧ ಕಾರ್ಯ ನಡೆಸಿ ಇದೀಗ ಇಬ್ಬರನ್ನು ಬಂಧಿಸಿದ್ದಾರೆ.

Share Information