Connect with us

  KARNATAKA

  ಕಾರ್ಕಳ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಹೆಡ್ ಮಾಸ್ಟರ್ ಕಂ ದೇವಳದ ಅರ್ಚಕ ಅರೆಸ್ಟ್..!

  ಕಾರ್ಕಳ : ಸುಮಾರು 13 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೋಳ ಗ್ರಾಮದ ಪಿಲಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

  ಬೋಳ ವಂಜಾರಕಟ್ಟೆ ನಿವಾಸಿ, ಇಚ್ಚೋಡಿ ಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ರಾಜೇಂದ್ರ ಆಚಾರ್ಯ(58) ಬಂಧಿತ ಆರೋಪಿ. ಈತ ಶಾಲೆಯ 13 ಮಕ್ಕಳಿಗೆ 2023ರ ಜೂ.5ರಿಂದ 2024ರ ಎ.3ರ ಮಧ್ಯಾವಧಿಯಲ್ಲಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು. ಅಲ್ಲದೆ ವಿದ್ಯಾರ್ಥಿನಿಯೊಬ್ಬಳ ಅಕ್ಕನ ಮೊಬೈಲ್‌ಗೆ ಅಸಭ್ಯ ಫೋಟೊಗಳನ್ನು ಕಳುಹಿಸಿ ತೊಂದರೆ ನೀಡುತ್ತಿದ್ದನು ಎಂದು ದೂರಲಾಗಿದೆ. ಈ ಬಗ್ಗೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಯನ್ನು ಪೊಲೀಸರು ಸಂಜೆ ಉಡುಪಿಯ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ಆತ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಅನೇಕ ದೂರಿಗಳಿದ್ದು, ಊರವರು ಕೂಡಾ ಆತನಿಗೆ ಬುದ್ದಿವಾದ ಹೇಳಿದ್ದರು. ಆದರೂ ಈ ಮುಖ್ಯ ಶಿಕ್ಷಕ ಹಳೆ ಚಾಳಿಯನ್ನು ಮುಂದುವರೆಸಿದ ಪರಿಣಾಮ, ಉಡುಪಿಯ ಮಹಿಳಾ ಮತ್ತು ಮಕ್ಕಳ ಕಲ್ಯಾಣಾ ಇಲಾಖೆ (ಮಕ್ಕಳ ಕ್ಷೇಮಾಭಿವೃದ್ದಿ ಘಟಕ)ಯ ಅಧಿಕಾರಿಗಳು ಶಾಲೆಗೆ ಆಗಮಿಸಿ ಸಮಗ್ರ ತನಿಖೆ ನಡೆಸಿದ್ದರು. ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದ ಅಪ್ರಾಪ್ತ ವಯಸ್ಸಿನ ಒಟ್ಟು 14 ವಿದ್ಯಾರ್ಥಿನಿಯರಿಂದ ದೂರು ಪಡೆದುಕೊಂಡಿದ್ದು, ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಬಳಿಕವೇ ಈ ಕ್ರಮ ಕೈಗೊಂಡಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ ಶಿಕ್ಷಕ ವೃತ್ತಿಯನ್ನು ನಿರ್ವಹಿಸುತ್ತಿದ್ದು, ತನ್ನ ಸೇವಾವಧಿಯನ್ನು ವಿವಿಧ ಶಾಲೆಗಳಲ್ಲಿ ಪೂರೈಸಿದ್ದಾರೆ. ಪ್ರಸ್ತುತ ವರ್ಗಾವಣೆಗೊಂಡು ಬರಬೈಲು ಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ತಾನು ಕರ್ತವ್ಯ ನಿರ್ವಹಿಸಿದ ಎಲ್ಲಾ ಶಾಲೆಗಳಲ್ಲೂ ಆತನ ವಿರುದ್ದ ಇದೇ ಆರೋಪಗಳಿದ್ದವು ಎಂದು ದೂರಲಾಗಿದೆ.

   

  Share Information
  Advertisement
  Click to comment

  You must be logged in to post a comment Login

  Leave a Reply