LATEST NEWS
ಕಾರ್ಕಳ ಅತ್ಯಾಚಾರ ಪ್ರಕರಣ – ಡ್ರಗ್ಸ್ ಸಪ್ಲೈ ಮಾಡಿದ್ದ ಆರೋಪಿ ಅರೆಸ್ಟ್
ಉಡುಪಿ ಅಗಸ್ಟ್ 26: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಡ್ರಗ್ಸ್ ಸಪ್ಲೈ ಮಾಡಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಬಂಧಿತನನ್ನು ಅಭಯ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ಪಿ ಅರೆಸ್ಟ್ ಆಗಿರುವ ಅಭಯ್ ಪ್ರಕರಣದ ಪ್ರಥಮ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಕೊಟ್ಟಿದ್ದಾನೆ ಎಂದು ನಮಗೆ ಪ್ರಥಮವಾಗಿ ತನಿಖೆಯಲ್ಲಿ ಕಂಡುಬಂದಿದೆ. ಕೃತ್ಯ ಎಸಗಿದ ಮೇಲೆ, ಪ್ರಥಮ ಆರೋಪಿ ತಪ್ಪಿಸಿಕೊಳ್ಳಲು ಸಹಕಾರ ಮಾಡುವುದಕ್ಕೆ ಪ್ರಯತ್ನ ಮಾಡಿರುವುದು ನಮಗೆ ತನಿಖೆಯಲ್ಲಿ ಕಂಡುಬಂದಿರುತ್ತದೆ. ಈಗ ಆತನನ್ನು ಬಂಧಿಸಿ ನಾಳೆ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಕಸ್ಟಡಿಗೆ ಪಡೆದುಕೊಂಡು, ಆತನನ್ನು ಸಂಪೂರ್ಣ ತನಿಖೆ ನಡೆಸಿ, ಮುಂದೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸದ್ಯ NDPS ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಸಂಶಯವಿರುವ ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಅವರ ತನಿಖೆ ನಡೆಸಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಾ.ಕೆ.ಅರುಣ್ ತಿಳಿಸಿದ್ದಾರೆ.
You must be logged in to post a comment Login