Connect with us

    LATEST NEWS

    ಮೇ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆ

    ಮೇ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆ

    ಮಂಗಳೂರು ಮಾರ್ಚ್ 27: ಕೇಂದ್ರ ಚುನಾವಣೆ ಆಯೋಗ ಇಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದೆ. ಕರ್ನಾಟಕ ರಾಜ್ಯದಲ್ಲಿ ಒಂದೇ ಹಂತದ ಮತದಾನ ನಡೆಯಲಿದೆ ಎಂದು ಚುನಾವಣೆ ಆಯುಕ್ತ ಒಂಪ್ರಕಾಶ್ ರಾವತ್ ತಿಳಿಸಿದ್ದಾರೆ.

    224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೇ 12 ರಂದು ಚುನಾವಣೆ ನಡೆಯಲಿದೆ. ಮೇ 15 ರಂದು ಮತದಾನ ಏಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

    ರಾಜ್ಯದಲ್ಲಿ ಒಟ್ಟು 4.96 ಕೋಟಿ ಮತದಾರರಿದ್ದು 56, 696 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಎಲ್ಲಾ ಮತಗಟ್ಟೆಗಳಲ್ಲಿ ವಿವಿಪಿಎಟಿ ಮತಯಂತ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

    ಎಪ್ರಿಲ್ 17 ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದ್ದು, ಎಪ್ರಿಲ್ 17 ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದು ಎಪ್ರಿಲ್ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ. ಎಪ್ರಿಲ್ 25 ರಂದು ನಾಮಪತ್ರ ಪರಿಶೀಲನೆ ನಡೆಸಲಾಗುವುದು ಎಪ್ರಿಲ್ 27 ರಂದು ನಾಮಪತ್ರ ಪಡೆಯಲು ಕೊನೆಯ ದಿನಾಂಕವಾಗಿದೆ.

    ಇಂದಿನಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದ್ದು, ಇನ್ನು ಮುಂದೆ ಯಾವುದೇ ರಾಜ್ಯ ಸರಕಾರ ಯಾವುದೇ ಘೋಷಣೆಗಳನ್ನು ಮಾಡುವಂತಿಲ್ಲ.

    ಪಕ್ಷಗಳ ಚುನಾವಣಾ ವೆಚ್ಚಕ್ಕೆ ಯಾವುದೇ ಮಿತಿಯಿರುವುದಿಲ್ಲ, ಆದರೆ ಅಭ್ಯರ್ಥಿಯೊಬ್ಬರ ಚುನಾವಣಾ ವೆಚ್ಚ 28 ಲಕ್ಷಕ್ಕೆ ಸೀಮಿತಗೊಳಿಸಲಾಗಿದೆ. ಈಗಿರುವ 224 ಸದಸ್ಯರ ಕರ್ನಾಟಕ ವಿಧಾನಸಭೆಯ ಕಾಲಾವಧಿ ಮೇ 28ರಂದು ಅಂತ್ಯಗೊಳ್ಳಲಿದೆ. ಮೇ ತಿಂಗಳು ಮುಗಿಯುವುದರೊಳಗೆ ಕರ್ನಾಟಕದಲ್ಲಿ ಚುನಾವಣಾ ಪ್ರಕ್ರಿಯೆಗಳು ಪೂರ್ತಿಗೊಳ್ಳಬೇಕಿದೆ.

    Share Information
    Advertisement
    Click to comment

    You must be logged in to post a comment Login

    Leave a Reply