Connect with us

    KARNATAKA

    ಕೆನಡಾ ಸಂಸತ್ ನಲ್ಲಿ ಮೊಳಗಿದ ಕನ್ನಡದ ಕಂಪು…!!

    ಕೆನಡಾ ಮೇ 20: ಕೆನಡಾ ಸಂಸತ್ ನಲ್ಲಿ ಕನ್ನಡದಲ್ಲಿ ಭಾಷಣ ಮಾಡುವ ಮೂಲಕ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಇತಿಹಾಸ ನಿರ್ಮಿಸಿದ್ದಾರೆ.

    ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಅವರು 2019ರಲ್ಲಿ ಕೆನಡಾ ದೇಶದ ನೇಪಿಯನ್ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಅವರು ಲಿಬರಲ್ ಪಕ್ಷದಿಂದ ಸ್ಪರ್ಧಿಸಿದ್ದರು. ಚಂದ್ರ ಆರ್ಯ ಅವರು ದ್ವಾರಾಳು ಗ್ರಾಮದ ಕೆ.ಗೋವಿಂದಯ್ಯ ಮತ್ತು ಜಯಮ್ಮ ದಂಪತಿ ಪುತ್ರ. ರಾಮನಗರದ ಗೌಸಿಯಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದ ಚಂದ್ರ ಆರ್ಯ ಧಾರವಾಡದಲ್ಲಿ ಎಂಬಿಎ ಶಿಕ್ಷಣ ಪೂರೈಸಿದ್ದರು.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೆನಡಾದ ಸಂಸತ್ತಿನಲ್ಲಿ ನಾನು ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಿದ್ದೇನೆ. ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ. ಭಾರತದ ಹೊರಗಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಎಂದು ಅವರು ಬರೆದುಕೊಂಡಿದ್ದು, ವಿಡಿಯೊ ತುಣುಕನ್ನು ಹಂಚಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply