Connect with us

    DAKSHINA KANNADA

    ಸೆ.6 ರಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ

    ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ʼಗೌರವ ಪ್ರಶಸ್ತಿʼ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4:30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.

    ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‌ ಫರೀದ್ ಕಾರ್ಯಕ್ರಮ ಉದ್ಘಾಟಿಸಲಿದ್ದು. ಪದ್ಮಶ್ರೀ ಹರೇಕಳ ಹಾಜಬ್ಬ ಗೌರವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. 2022ನೇ ಸಾಲಿನ ಗೌರವ ಪ್ರಶಸ್ತಿಯನ್ನು ಹಂಝತುಲ್ಲಾಹ್ ವೈ. ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್ ಇಸ್ಮಾಈಲ್ ಉಳ್ಳಾಲ (ಬ್ಯಾರಿ ಸಾಹಿತ್ಯ), ಎಂ.ಜಿ. ಶಾಹುಲ್ ಹಮೀದ್ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಹಾಗೂ 2023ನೇ ಸಾಲಿನ ಗೌರವ ಪ್ರಶಸ್ತಿಯನ್ನು ಹಾಜಿ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), ಮುಹಮ್ಮದ್ ಶರೀಫ್ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಹಾಗೂ ಅಶ್ರಫ್ ಅಪೋಲೊ ಕಲ್ಲಡ್ಕ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಸ್ವೀಕರಿಸಲಿದ್ದಾರೆ.
    ಮಂಗಳೂರು ವಿಶ್ವವಿದ್ಯಾನಿಲಯ ಬ್ಯಾರಿ ಅಧ್ಯಯನ ಪೀಠದ ಸಂಯೋಜಕ ಡಾ. ಅಬೂಬಕ್ಕರ್‌ ಸಿದ್ದೀಕ್ ʼಬೆಲ್ಕಿರಿʼ ದ್ವೈಮಾಸಿಕ ಸಂಚಿಕೆಯನ್ನು ಬಿಡುಗಡೆ ಮಾಡಲಿದ್ದು. ಬಂಟ್ವಾಳ ಮೂಡದ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಅಭಿನಂದನಾ ಭಾಷಣ ಮಾಡಲಿದ್ದಾರೆ.
    ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌‌ ಯು.ಹೆಚ್. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರನಾಥ್‌ ಗಟ್ಟಿ ಕಾಪಿಕಾಡ್‌, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಜೋಕಿಂ ಅಲ್ವಾರಿಸ್‌, ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರುಗಳಾದ ಎಂ.ಬಿ. ಅಬ್ದುಲ್‌ ರಹ್ಮಾನ್‌, ರಹೀಮ್‌ ಉಚ್ಚಿಲ್‌, ಬಿ.ಎ. ಮುಹಮ್ಮದ್‌ ಹನೀಫ್ ಮತ್ತು ಕರಂಬಾರ್‌ ಮಹಮ್ಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
    ಸಮಾರಂಭದಲ್ಲಿ ಬ್ಯಾರೀಸ್‌ ಚೇಂಬರ್‌ ಆಫ್‌ ಕಾಮರ್ಸ್‌ ಆಂಡ್‌ ಇಂಡಸ್ಟ್ರೀಸ್ ಇದರ ಅಧ್ಯಕ್ಷ ಹಾಜಿ ಎಸ್. ಎಂ. ರಶೀದ್‌, ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಶೀರ್‌ ಬೈಕಂಪಾಡಿ, ಕೇಂದ್ರ ಬ್ಯಾರಿ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಿ.ಎಂ. ಅಸ್ಲಮ್‌, ಚಿಕ್ಕಮಗಳೂರು ಜಿಲ್ಲಾ ಬ್ಯಾರಿ ಒಕ್ಕೂಟದ ಅಧ್ಯಕ್ಷ ಟಿ.ಎಂ. ನಾಸಿರ್, ಮೈಸೂರಿನ ದಿ ಬ್ಯಾರೀಸ್‌ ವೆಲ್ಫೇರ್‌ ಅಸೋಸಿಯೇಶನ್ ನ ಅಧ್ಯಕ್ಷ ಯು.ಕೆ. ಹಮೀದ್‌ ಹಾಜಿ, ಅಖಿಲ ಭಾರತ ಬ್ಯಾರಿ ಮಹಾಸಭಾದ ಅಧ್ಯಕ್ಷ ಅಬ್ದುಲ್‌ ಅಝೀಝ್‌ ಬೈಕಂಪಾಡಿ, ಅಖಿಲ ಭಾರತ ಬ್ಯಾರಿ ಪರಿಷತ್ ನ ಗೌರವಾಧ್ಯಕ್ಷ ಯೂಸುಫ್ ವಖ್ತಾರ್, ʼಮೇಲ್ತೆನೆʼಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ, ಕೊಡಗಿನ ಬ್ಯಾರೀಸ್‌ ವೆಲ್ಫೇರ್‌ ಟ್ರಸ್ಟ್ ಅಧ್ಯಕ್ಷ ಮುನೀರ್‌ ಅಹಮ್ಮದ್‌ ಎಸ್.‌ ಐ., ಕರಾವಳಿ ಬ್ಯಾರಿ ಕಲಾವಿದರ ಒಕ್ಕೂಟದ ಅಧ್ಯಕ್ಷ ಹುಸೈನ್‌ ಕಾಟಿಪಳ್ಳ ಹಾಗೂ ಬ್ಯಾರಿ ಸಂಗೀತ ಕಲಾವಿದರ ಒಕ್ಕೂಟದ ಅಧ್ಯಕ್ಷ ರಶೀದ್‌ ನಂದಾವರ ಉಪಸ್ಥಿತರಿರುವರು.
    ಕಾರ್ಯಕ್ರಮದಲ್ಲಿ ʼಬಡ್ಡೂರುʼ ಬಳಗದಿಂದ ವಿನೂತನ ಪ್ರಹಸನ ʼಮೂರ್ತಿಗಳುʼ ಹಾಗೂ ಎಂಜಿಎಂ ತಾಲೀಮು ಸ್ಪೋರ್ಟ್ಸ್‌ ಗುರುಪುರ ಇವರಿಂದ ತಾಲೀಮು ಪ್ರದರ್ಶನ ನಡೆಯಲಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್‌ ರಾಜೇಶ್ ಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply