DAKSHINA KANNADA
ನೂರು ದಿನಕ್ಕೆ ಭಂಡ ಕಾಂಗ್ರೆಸ್ಸಿನ 100 ಕರ್ಮ ಕಾಂಡಗಳು: ಕಾಂಗ್ರೆಸ್ ವಿರುದ್ದ ಬಿಜೆಪಿ ಟೀಕೆ..!

ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸಿಎಂ ಸಿದ್ದರಾಮಯ್ಯರ ಸರ್ಕಾರ 100 ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕೂ ಹೆಚ್ಚು ಹಳವಂಡಗಳೇ ಹೆಚ್ಚು ಎಂದು ರಾಜ್ಯ ಬಿಜೆಪಿ ಕಟುವಾಕಿ ಕುಟುಕಿದೆ.
ಬೆಂಗಳೂರು: ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸಿಎಂ ಸಿದ್ದರಾಮಯ್ಯರ ಸರ್ಕಾರ 100 ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕೂ ಹೆಚ್ಚು ಹಳವಂಡಗಳೇ ಹೆಚ್ಚು ಎಂದು ರಾಜ್ಯ ಬಿಜೆಪಿ ಕಟುವಾಕಿ ಕುಟುಕಿದೆ.

‘ಅಧಿಕಾರಿಗಳ ದುರುಪಯೋಗ, ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ, ಶ್ಯಾಡೋ ಸಿಎಂ, ಕಾಸಿಗಾಗಿ ಪೋಸ್ಟಿಂಗ್, ಮರಳು ಮಾಫಿಯಾ, ರೈತರ ಆತ್ಮಹತ್ಯೆ, ಕಲುಷಿತ ನೀರು, ಕಳಪೆ ಆಹಾರ ವಿತರಣೆ, ಉಡುಪಿಯ ಅಮಾನುಷ ಘಟನೆ ಅಬ್ಬಬ್ಬಾ ಒಂದಾ ಎರಡಾ ಭಂಡ ಕಾಂಗ್ರೆಸ್ಸಿನ 100 ಕರ್ಮ ಕಾಂಡಗಳು ತೆರೆಯುತ್ತವೆ..!’ ಎಂದು ಬಿಜೆಪಿ ಟೀಕಿಸಿದೆ.
ಸರ್ವಾಧಿಕಾರಿ ಧೋರಣೆ ತೋರುತ್ತಿರುವ ರಾಜ್ಯ ಕಾಂಗ್ರೆಸ್ ತುಘಲಕ್ ಸರ್ಕಾರದ 100 ದಿನಗಳ ಕರಾಳ ಆಡಳಿತ ಕುರಿತ ʻಕೈ ಕೊಟ್ಟ ಯೋಜನೆಗಳು, ಹಳಿ ತಪ್ಪಿದ ಆಡಳಿತʼ ಪುಸ್ತಕವನ್ನು ರಾಜ್ಯಾಧ್ಯಕ್ಷರಾದ ಶ್ರೀ @nalinkateel, ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSBommai ಮತ್ತು ಮಾಜಿ ಸಚಿವರಾದ ಶ್ರೀ @GovindKarjol ಅವರು ಇಂದಿನ ಪತ್ರಿಕಾಗೋಷ್ಠಿಯಲ್ಲಿ… pic.twitter.com/NdsFKIvMGa
— BJP Karnataka (@BJP4Karnataka) August 29, 2023
‘ಗ್ಯಾರಂಟಿಗಳ ಪುಂಗಿ ಊದಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಎಡವಿದ್ದೂ ಅಲ್ಲದೆ ಇಂದಿಗೂ ಅವುಗಳನ್ನು ಸರಿಯಾಗಿ ಜಾರಿ ಮಾಡಲಾಗಲಿಲ್ಲ.
ಗ್ಯಾರಂಟಿಗಳ ಅನುಷ್ಠಾನಕ್ಕೂ ಮೊದಲೇ ರಾಜ್ಯದಲ್ಲಿ ಶುರುವಾಗಿದ್ದು ಕಲೆಕ್ಷನ್ ಏಜೆಂಟ್ ಸುರ್ಜೇವಾಲಾರ ದರ್ಬಾರ್. ಉನ್ನತ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಅಧಿಕಾರ ಚಲಾಯಿಸಿದ್ದರು.
ಈ ಮೂಲಕ ರಾಜ್ಯದ ಬೊಕ್ಕಸದಿಂದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂದಾಯವಾದದ್ದು ಎಷ್ಟು ಎಂಬುದನ್ನು ಎಲ್ಲವನ್ನೂ ತಿಳಿದ ಡಿಸಿಎಂ ಡಿಕೆ ಶಿವಕುಮಾರ್ ಅವರೇ ತಿಳಿಸಬೇಕಷ್ಟೆ’ ಎಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ.
ಗ್ಯಾರಂಟಿಗಳ ಪುಂಗಿ ಊದಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುವಲ್ಲಿ ಎಡವಿದ್ದೂ ಅಲ್ಲದೆ ಇಂದಿಗೂ ಅವುಗಳನ್ನು ಸರಿಯಾಗಿ ಜಾರಿ ಮಾಡಲಾಗಲಿಲ್ಲ.
‘ಸುರ್ಜೇವಾಲಾ ಅವರು ಗಂಟು ತೆಗೆದುಕೊಂಡು ದೆಹಲಿ ಫ್ಲೈಟ್ ಹತ್ತುತ್ತಿದ್ದಂತೆ, ಅಸಲಿ ಆಟ ಶುರುವಿಟ್ಟುಕೊಂಡಿದ್ದು ಸಿದ್ದರಾಮಯ್ಯರ ಸುಪುತ್ರ #ShadowCM ಯತೀಂದ್ರ. ಒಂದೇ ಹುದ್ದೆಗೆ 4 ಅಧಿಕಾರಿಗಳಿಗೆ ಶಿಫಾರಸ್ಸು ಪತ್ರಗಳನ್ನು ಕೊಟ್ಟು ಮುಖ್ಯಮಂತ್ರಿಗಳ ಆದೇಶ ಪತ್ರಗಳನ್ನು ದುರುಪಯೋಗ ಮಾಡಿಕೊಳ್ಳಲಾಯಿತು.
ಕಾಸಿಗಾಗಿ ಪೋಸ್ಟಿಂಗ್ ದಂಧೆ ರಾಜ್ಯದಲ್ಲಿ ಹೊಸ ಅನಧಿಕೃತ ಉದ್ಯಮವನ್ನೇ ಶುರು ಮಾಡಿತು.
ಕೊನೆಗೆ ಸಾಂವಿಧಾನಿಕ ಹುದ್ದೆಯನ್ನೇ ಪುತ್ರನಿಗೆ ನೀಡಿ ಸಿದ್ದರಾಮಯ್ಯರು ನನಗೂ ಧೃತರಾಷ್ಟ್ರನಿಗೂ ವ್ಯತ್ಯಾಸವಿಲ್ಲವೆಂಬುದನ್ನು ಸಾಬೀತುಪಡಿಸಿದರು.
ಸೇಡಿನ ರಾಜಕೀಯಕ್ಕಿಳಿದ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಕಿರುಕುಳಕ್ಕೆ ಮನನೊಂದು ಸಾರಿಗೆ ನೌಕರ ಆತ್ಮಹತ್ಯೆ ಯತ್ನ ನಡೆಸಿದ್ದು ಕಲೆಕ್ಷನ್ ಮಾಡಿ ತರದ ಅಧಿಕಾರಿಗಳನ್ನು ನಡೆಸಿಕೊಳ್ಳುವ ರೀತಿಗೆ ಕೈಗನ್ನಡಿ..!’ ಎಂದು ಬಿಜೆಪಿ ಟೀಕಿಸಿದೆ.
https://twitter.com/BJP4Karnataka/status/1696421989312028774?s=20
10 ಕೆಜಿ ಅಕ್ಕಿ ಬೇಕೋ ಬೇಡ್ವಾ ಎಂದಿದ್ದ ಸಿದ್ದರಾಮಯ್ಯರವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಇನ್ನಿಲ್ಲದ ಪ್ರಯತ್ನ…
‘ಮುಖ್ಯಮಂತ್ರಿ ಸಿದ್ದರಾಮಯ್ಯರು ಚುನಾವಣೆಗೂ ಮುನ್ನ ಕಾಕಾ ಪಾಟೀಲ್‌ಗೂ ಫ್ರೀ ಮಹಾದೇವಪ್ಪ ನಿಂಗೂ ಫ್ರೀ ಎಂದು ಪುಂಗಿ ಊದಿ ರಾಜ್ಯದ ಜನರ ಕಿವಿ ಮೇಲೆ ಕಂಡೀಷನ್ ಅಪ್ಲೈ ಎನ್ನುವ ಹೂವನ್ನು ಲೀಲಾಜಾಲವಾಗಿ ಇಟ್ಟರು.
10 ಕೆಜಿ ಅಕ್ಕಿ ಬೇಕೋ ಬೇಡ್ವಾ ಎಂದಿದ್ದ ಸಿದ್ದರಾಮಯ್ಯರವರು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದರು.
ಆದರೆ ಇವರ ಮೋಸ ಜನರಿಗೆ ತಿಳಿಯುತ್ತಿದೆ ಎಂಬ ಸೂಚನೆ ಸಿಗುತ್ತಿದ್ದಂತೆ 15 ಕೆಜಿ ಅಕ್ಕಿಯ ಬದಲಿಗೆ ಪ್ರಧಾನಿ ಮೋದಿ ಸರ್ಕಾರ ನೀಡುವ 5 ಕೆಜಿ ಅಕ್ಕಿಯೇ ತಮ್ಮದೆಂದು ಬಿಂಬಿಸಿದರು.
ಇನ್ನುಳಿದ 5 ಕೆಜಿ ಅಕ್ಕಿಗೆ ಹಣವನ್ನೇ ತಿನ್ನಿ ಎಂದು ಕೈತೊಳೆದುಕೊಂಡರು.
ವಿಪರ್ಯಾಸವೆಂದರೆ ಪ್ರಧಾನಿ ಮೋದಿ ಅವರ ಸರ್ಕಾರದ 5 ಕೆಜಿ ಅಕ್ಕಿಯಲ್ಲಿ 2 ಕೆಜಿಯನ್ನು #ATMSarkaraವೇ ತಿಂದು ತೇಗಿದೆ. ಫಲಾನುಭವಿಗಳಿಗೆ 3 ಕೆಜಿ ಅಕ್ಕಿ ನೀಡಿ 2 ಕೆಜಿ ರಾಗಿ ನೀಡುತ್ತಿದೆ.
5 ಕೆಜಿ ಅಕ್ಕಿಗೆ ಹಣ ಕೊಡುತ್ತೇವೆಂದು ಪಡಿತರ ಚೀಟಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿಲ್ಲವೆಂದು ಇನ್ನೂ ಕಾಗೆ ಹಾರಿಸುತ್ತಲೇ ಇದೆ ಕಾಂಗ್ರೆಸ್..!’ ಎಂದು ಕುಟುಕಿದೆ.