LATEST NEWS
ಕರ್ನಾಟಕ ಬಂದ್ -ಕರಾವಳಿಯಲ್ಲಿ ಯಾವುದೇ ಬಂದ್ ಇಲ್ಲ..ಸಹಜ ಸ್ಥಿತಿಯಲ್ಲಿ ಜನಜೀವನ

ಮಂಗಳೂರು ಸೆಪ್ಟೆಂಬರ್ 29 : ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳ ಒಕ್ಕೂಟ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಜನ ಜೀವನ ಎಂದಿನಂತೆ ಇದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು, ಈಗಾಗಲೇ ಬೆಂಗಳೂರು , ಮಂಡ್ಯ , ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಅಲ್ಲಲಿ ಪ್ರತಿಭಟನೆ ನಡೆಯುತ್ತಿದೆ.

ಆದರೆ ಕರಾವಳಿಯಲ್ಲಿ ಬಂದ್ ಗೆ ನೇರವಾಗಿ ಇಂಗಿತ ವ್ಯಕ್ತವಾಗಿಲ್ಲ. ನೈತಿಕ ಬೆಂಬಲವಷ್ಟೇ ನೀಡಿದ್ದು, ಹೀಗಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸುತ್ತಿದೆ. ಶಾಲಾ ಕಾಲೇಜುಗಳು ತೆರೆದಿದ್ದು, ಎಂದಿನಂತೆ ಜೀನಜೀವನ ನಡೆಯುತ್ತಿದೆ.
ಕಾವೇರಿ ವಿಚಾರವಾಗಿ ನಮಗೆ ಸಹಾನುಭೂತಿಯಿದ್ದು ಆದರೆ ಬಂದ್ ನಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗಲಿದೆ ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.
ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಸೂಚಿಸಿದ ಹಿನ್ನಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇದೆ.