Connect with us

    KARNATAKA

    ಕರ್ನಾಟಕ ಕೊರೊನಾ UPDATES : ಕೋವಿಡ್ ಗೆ 1 ಬಲಿ, ಮುಂಜಾಗ್ರತಾ ಕ್ರಮಕ್ಕೆ ಆರೋಗ್ಯ ಸಚಿವರ ಸೂಚನೆ..!

    ಬೆಂಗಳೂರು: ಪಕ್ಕದ ಕೇರಳದಲ್ಲಿ ತಾಂಡವ ಆರಂಭಿಸಿದ್ದ ಕೊರರೊನಾ ಇದೀಗ ಕರ್ನಾಟಕ ರಾಜ್ಯಕ್ಕೂ ಕಾಲಿಟ್ಟಿದ್ದು ಕೋವಿಡ್ ಸೋಂಕಿಗೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ. ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ತೊಂದರೆ ಇಲ್ಲ ಆದ್ರೆ ಹೆಚ್ಚು ಜನಜಂಗುಳಿ ಇರುವ ಪ್ರದೇಶದಲ್ಲಿ ಮಾಸ್ಕ್ ಹಾಕಿದರೆ ಉತ್ತಮ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.


    ವಿಕಾಸಸೌಧದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಕೋವಿಡ್ ನಿಂದ ಇದೇ ರೀತಿಯಲ್ಲಿ ಕೇರಳದಲ್ಲಿ ಐದು ಜನರ ಸಾವು ಆಗಿದೆ.‌ಅವರಿಗೂ ಹೃದಯ ಸಂಬಂಧಿ, ಕ್ಯಾನ್ಸರ್ ಸಮಸ್ಯೆ ಜೊತೆಗೆ ಕೋವಿಡ್ ಬಂದ ಹಿನ್ನಲೆಯಲ್ಲಿ ಸಾವು ಆಗಿದೆ. ಅದೇ ರೀತಿಯಲ್ಲಿ ಕರ್ನಾಟಕದಲ್ಲಿ ಒಂದು ಸಾವು ಆಗಿದೆ ಎಂದು ಮಾಹಿತಿ ನೀಡಿದರು.
    ಇದೇ ಸಂದರ್ಭದಲ್ಲಿ ಕೇಂದ್ರ ಆರೋಗ್ಯ ಸಚಿವರ ಜೊತೆಗಿನ ಸಭೆಯ ಬಗ್ಗೆ ಮಾಹಿತಿಯನ್ನು ನೀಡಿದ ಸಚಿವರು, ಕೇಂದ್ರ ಆರೋಗ್ಯ ಸಚಿವ ಹಾಗೂ ಉನ್ನತ ಅಧಿಕಾರಿಗಳು ಹಾಗೂ ಎಲ್ಲಾ ರಾಜ್ಯದ ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದರು. ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಪರಿಸ್ಥಿತಿ ಮಾಹಿತಿ ನೀಡಿದ್ದಾರೆ ಎಂದು‌ ತಿಳಿಸಿದರು. ಸಭೆಯಲ್ಲಿ ವೆಂಟಿಲೇಟರ್ ನಿರ್ವಹಣೆಗೆ ಸಹಕಾರ ಕೊಡಬೇಕು ಎಂದು ಮನವಿ ಮಾಡಿದ್ದೇವೆ. ಐಸಿಎಂಆರ್ ಫೋರ್ಟಲ್ ಡೇಟಾ ಮಾಹಿತಿ ಸಿಗುತ್ತಿಲ್ಲ .ಪೋರ್ಟಲ್ ಸರಿಪಡಿಸಲು ಮನವಿ ಮಾಡಿದ್ದೇವೆ ಎಂದರು.
    ಕೋವಿಡ್ ಹಿನ್ನಲೆಯ ಜೆಎನ್ 1 ರೂಪಾಂತರಿ ಅಂತರಾಷ್ಟ್ರೀಯ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಹರಡಿದೆ. ಅಮೆರಿಕ ಯೂರೋಪ್ ರಾಷ್ಟ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ. ಬಹಳ ವೇಗವಾಗಿ ಹರಡುವ ವೈರಾಣಾಗಿದೆ.ದೇಶದಲ್ಲಿ ಜೆ ಎನ್ 120 ಪ್ರಕರಣ ವರದಿಯಾಗಿದೆ. ಗೋವಾದಲ್ಲಿ 18, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ 1 ಪತ್ತೆಯಾಗಿದೆ. ಸಾರಿ ಕೇಸ್ ಗಳನ್ನು ಆರ್ ಟಿ ಪಿ ಸಿ ಆರ್ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಕಡ್ಡಾಯವಾಗಿ ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಮಾಸ್ಕ್ ಹಾಕಲು ಸೂಚನೆ ನೀಡಲಾಗಿದೆ. ಜನರು ತಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ತೊಂದರೆ ಇಲ್ಲ ಆದ್ರೆ ಹೆಚ್ಚು ಜನಜಂಗುಳಿ ಇರುವ ಪ್ರದೇಶದಲ್ಲಿ ಮಾಸ್ಕ್ ಹಾಕಿದರೆ ಉತ್ತಮ ಎಂದು ಸಚಿವರು ನುಡಿದರು.

    ಕ್ರಿಸ್ಮಸ್, ನ್ಯೂಇಯರ್‌ ಸೆಲೆಬ್ರೇಷನ್‌ಗೆ ನಿರ್ಬಂಧ ಇಲ್ಲ

    ಡಿಸೆಂಬರ್‌ 21ರ ಗುರುವಾರ ಸಿಎಂ ಸಿದ್ದರಾಮಯ್ಯ ಅವರ ಜತೆ ಸಭೆ ಇದೆ. ಅಲ್ಲಿ ರಾಜ್ಯದಲ್ಲಿ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಕ್ರಿಸ್ಮಸ್ ಹಾಗೂ ನ್ಯೂಇಯರ್‌ ಸೆಲೆಬ್ರೇಷನ್‌ಗೆ ಸದ್ಯಕ್ಕೆ ಯಾವುದೇ ನಿರ್ಬಂಧವನ್ನು ವಿಧಿಸುವುದಿಲ್ಲ. ಮುಂದಿನ ಪರಿಸ್ಥಿತಿಯನ್ನು ಗಮನಿಸಿ ಸೂಕ್ತ ತೀರ್ಮಾನವನ್ನು ಕೈಗೊಳ್ಳಲಾಗುವುದು ಎಂದಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply