Connect with us

    KARNATAKA

    karnataka covid updates: ರಾಜ್ಯದಲ್ಲಿ ಕೊರೋನಾಗೆ ಇಂದು 4 ಬಲಿ..! 

    ಬೆಂಗಳೂರು: ಕರ್ನಾಟಕದಲ್ಲಿ ಚಳಿ, ಗಾಳಿ ಮಳೆ ಮಧ್ಯೆ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ಕೋವಿಡ್ ಗೆ ನಾಲ್ವರು ಮೃತಪಟ್ಟಿದ್ದಾರೆ.

    298 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ. ಇಂದು ಕೋವಿಡ್ ನಿಂದ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,791 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.82 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

    ಸೋಂಕಿತರಲ್ಲಿ 1,168 ಮಂದಿ ಮನೆ ಆರೈಕೆಗೆ ಒಳಗಾದರೆ, 72 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 9 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

    ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದು, 172 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply