LATEST NEWS
ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ – ಮೇ 10ಕ್ಕೆ ಮತದಾನ…ಮೇ 13ಕ್ಕೆ ಫಲಿತಾಂಶ
ನವದೆಹಲಿ ಮಾರ್ಚ್ 29: ಕರ್ನಾಟಕ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. 224 ಸ್ಥಾನಗಳಿಗೆ ಮೇ 10 ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಬರಲಿದೆ.
ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್, ಮೇ 10 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೇ 13 ರಂದು ಫಲಿತಾಂಶ ಬರಲಿದೆ. ಎಪ್ರಿಲ್ 13 ಚುನಾವಣೆಯ ನೋಟಿಪಿಕೇಶನ್ ಬರಲಿದ್ದು. ಎಪ್ರಿಲ್ 20 ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಎಪ್ರಿಲ್ 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದರು. ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13 ರಂದು ಫಲಿತಾಂಶ ಬರಲಿದೆ.
ಈಗಾಗಲೇ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಕರ್ನಾಟಕದಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯರಿಗೆ ಮನೆಯಲ್ಲೇ ಮತ ಚಲಾವಣೆಗೆ ಅವಕಾಶ ನೀಡಲಾಗಿದೆ ಎಂದರು.
ಕರ್ನಾಟಕದಲ್ಲಿ 5,21,73579 ಒಟ್ಟು ಮತದಾರರಿದ್ದು, 2, 62,42, 561 ಪುರುಷರು, 2,59,26,319 ಮಹಿಳೆಯರು, 4,699 ತೃತೀಯ ಲಿಂಗಿ ಹಾಗೂ 5.55 ಲಕ್ಷ ದಿವ್ಯಾಂಗ ಮತದಾರರಿದ್ದಾರೆ. 9.17.241 ಮಂದಿ ಮೊದಲ ಸಲ ಮತದಾನ ಮಾಡುತ್ತಿದ್ದಾರೆ ಎಂದು ಹೇಳಿದರು.
2023ರ ಮೇ 23ರ ಒಳಗೆ ವಿಧಾನಸಭೆ ಅಂತ್ಯವಾಗಬೇಕು. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆ ಆಗಬೇಕು. ಮೇ 24ಕ್ಕೆ ವಿಧಾನಸಭೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ. ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗುತ್ತಿದೆ. ಸಾಕಷ್ಟು ಚಾಲೆಂಜ್ ಗಳಿವೆ, ಅವುಗಳನ್ನು ಸುಧಾರಿಸಿದೆ. ಬುಡಕಟ್ಟು ಸಮುದಾಯ ಮತದಾನಕ್ಕೂ ವ್ಯವಸ್ಥೆ ಮಾಡಲಾಗಿದೆ. ತೃತೀಯ ಲಿಂಗಿಗಳು ಮತದಾರರ ಸೇರ್ಪಡೆಗೆ ಹಿಂದೇಟು ಹಾಕುತ್ತಾರೆ. ಅವರಿಗೆ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.
https://youtube.com/live/wVdJZCMzgE8?feature=share