LATEST NEWS
ವಿಧಾನ ಸಭೆ ಚುನಾವಣೆ – ಬಹಿರಂಗ ಪ್ರಚಾರಕ್ಕೆ ಇಂದು ಕೊನೆ ದಿನ ..ಇಂದಿನಿಂದ ಮದ್ಯ ಮಾರಾಟಕ್ಕೆ ಬ್ರೇಕ್
ಮಂಗಳೂರು ಮೇ 08: ರಾಜ್ಯ ವಿಧಾನ ಸಭೆ ಚುನಾವಣೆ ಮತದಾನಕ್ಕೆ ಇನ್ನು ಎರಡು ದಿನ ಬಾಕಿ ಇದ್ದು, ಬಹಿರಂಗ ಪ್ರಚಾರ ಇಂದು ಕೊನೆಯಾಗಲಿದ್ದು, ಇಂದಿನಿಂದಲೇ ಮದ್ಯ ಮಾರಾಟಕ್ಕೆ ಬ್ರೇಕ್ ಬೀಳಲಿದೆ.
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೇವಲ ಎರಡೇ ದಿನ ಬಾಕಿ ಇದೆ. ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು ಮಂಗಳವಾರ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಮತದಾನ ನಡೆಯುವ 48 ಗಂಟೆ ಮುಂಚೆ ಯಾವುದೇ ರೋಡ್ ಶೋ, ತೆರೆದ ವಾಹನದಲ್ಲಿ ಪ್ರಚಾರ ಮಾಡುವಂತಿಲ್ಲ. ಸ್ಟಾರ್ ಪ್ರಚಾರಕರು ಮತ್ತು ಅಭ್ಯರ್ಥಿಗಳು ಕ್ಷೇತ್ರದಲ್ಲಿ ಉಳಿಯುವಂತಿಲ್ಲ. ಒಂದು ವೇಳೆ ಕಾಣಿಸಿಕೊಂಡರೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಲಿದೆ.
ಇಂದಿನಿಂದ `ಎಣ್ಣೆ’ ಸಿಗಲ್ಲ: ಇಂದಿನಿಂದ ಒಟ್ಟು ನಾಲ್ಕು ದಿನಗಳ ಕಾಲ ಮದ್ಯ ಮಾರಾಟ ನಿಷೇಧ ಆಗಲಿದೆ. ಇಂದು ಸಂಜೆ 5 ಗಂಟೆಯಿಂದ ಮೇ 10 ರಂದು ಮಧ್ಯರಾತ್ರಿವರೆಗೂ ಮದ್ಯ ಮಾರಾಟ ಇರಲ್ಲ. ಮೇ 13 ಅಂದ್ರೆ ಮತ ಎಣಿಕೆ ದಿನವೂ ಎಣ್ಣೆ ಸಿಗಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿ ಮದ್ಯ ಮಾರಾಟ ಮಾಡಿದ್ರೆ ಕಾನೂನು ಕ್ರಮ ಜರುಗಿಸಲಿದ್ದಾರೆ.
You must be logged in to post a comment Login