KARNATAKA
ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಸರ್ಕಾರ ನಿರ್ಧಾರ
ಬೆಂಗಳೂರು, ಮೇ 12: ಮತಾಂತರ ಕಾಯ್ದೆ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಸುಗ್ರಿವಾಜ್ಞೆ ಮೂಲಕ ಮತಾಂತರ ಕಾಯ್ದೆ ಜಾರಿಗೆಗೆ ಸರ್ಕಾರ ತೀರ್ಮಾನ ಮಾಡಿದೆ.
ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆ ಪಡೆದಿತ್ತು. ಆದರೆ ಪರಿಷತ್ ನಲ್ಲಿ ಬಹುಮತ ಇಲ್ಲದ್ದಕ್ಕೆ ಕಾಯ್ದೆ ಮಂಡನೆಯನ್ನು ಸರ್ಕಾರ ಮುಂದೂಡಿತ್ತು.
ಈ ಬಾರಿ ಬಜೆಟ್ ಅಧೀವೇಶದಲ್ಲಿ ಕೂಡ ಸರ್ಕಾರ ಮಂಡನೆ ಮಾಡಲಿಲ್ಲ. ಆದರೆ ಇದೀಗ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕಾಯ್ದೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರ ಇಂದು ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಆದ್ಯಾದೇಶ 2022 ಇದಕ್ಕೆ ಅನುಮೋದನೆ ನೀಡಿದೆ.
ಸಂಪುಟ ಅನುಮೋದನೆ ಪಡೆದು ರಾಜ್ಯಪಾಲರಿಗೆ ಸುಗ್ರಿವಾಜ್ಞೆ ಹೊರಡಿಸುವಂತೆ ಶಿಫಾರಸು ಮಾಡಲಿದೆ. ರಾಜ್ಯಪಾಲರ ಅಂಕಿತದ ಬಳಿಕ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಅಧಿಕೃತವಾಗಿ ಜಾರಿಗೆ ಬರುತ್ತದೆ.