Connect with us

LATEST NEWS

ಗೋ ರಕ್ಷಕರ ಮೇಲಿನ ಕೇಸ್ ಹಿಂಪಡೆಯಲು ಚಿಂತನೆ – ಸಚಿವ ಪ್ರಭು ಚವ್ಹಾಣ್

ಮಂಗಳೂರು : ಗೋ ಅಕ್ರಮ ಸಾಗಾಟ ಸಂದರ್ಭ ತಡೆ ಹಿಡಿದು ಅಕ್ರಮ ಗೋಸಾಗಾಟಗಾರರ ಮೇಲೆ ಹಲ್ಲೆ ನಡೆಸಿದ ಸಂದರ್ಭ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹಾಗೂ ಗೋ ರಕ್ಷಕರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.


ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪಶುಸಂಗೋಪನೆ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿಂದೆ ಗೋಸಂರಕ್ಷಣೆಗಾಗಿ ಕಾರ್ಯಕರ್ತರು ಗೋಸಾಗಾಟ ತಡೆದ ವೇಳೆ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದರೆ ಅದನ್ನು ತೆರವುಗೊಳಿಸಬೇಕು ಎಂದಿದ್ದೇನೆ. ಈ ಬಗ್ಗೆ ಇನ್ನೂ ಅಂತಿಮ ನಿರ್ಣಯ ಕೈಗೊಂಡಿಲ್ಲ. ಗೃಹಸಚಿವರ ಜತೆಗೆ ಚರ್ಚಿಸಬೇಕಿದೆ ಎಂದರು.

ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರೊಂದಿಗೆ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಪ್ ಸಚಿವರಾದ ಪ್ರಭು.ಬಿ ಚವ್ಹಾನ್ ತಿಳಿಸಿದರು.
ಗೋಹತ್ಯೆ ಕಾಯ್ದೆಯನ್ನು ಉಲ್ಲಂಘಿಸಿದ್ದಲ್ಲಿ ಅಂತವರ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಕಾಯ್ದೆ ಉಲ್ಲಂಘಿಸಿದವರಿಗೆ ಮೂರು ವರ್ಷದಿಂದ ಆರು ವರ್ಷ ದವರೆಗೆ ಜೈಲು ಶಿಕ್ಷೆ, ಮೊದಲನೇ ಅಪರಾಧಕ್ಕೆ 50 ಸಾವಿರದಿಂದ 5 ಲಕ್ಷದವರೆಗೆ ಹಾಗೂ ಎರಡನೇ ಸಲ ಮಾಡಿದ ಅಪರಾಧಕ್ಕೆ ಒಂದು ಲಕ್ಷದಿಂದ 10 ಲಕ್ಷದ ವೆರೆಗೆ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಜಾನುವಾರುಗಳನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಸಾಗಾಣೆ ಮಾಡುವಾಗ ಪಶು ವೈದ್ಯರಿಂದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು, ಸಾಗಾಣಿಕಾ ವಾಹನದಲ್ಲಿ 5-6 ದನಗಳಿಗೆ ಮಾತ್ರ ಅವಕಾಶವಿರುತ್ತದೆ. ಅಲ್ಲದೇ ಜಾನುವಾರುಗಳಿಗೆ ಅಗತ್ಯವಿರುವ ಆಹಾರ ಮತ್ತು ನೀರಿನ ವ್ಯವಸ್ಥೆಯನ್ನು ವಾಹನದಲ್ಲಿ ಇರಬೇಕು ಎಂದರು. ಗರ್ಭಧಾರಿತ ಜಾನುವಾರುಗಳನ್ನು ಸಾಗಾಣಿಕೆ ಮಾಡಲು ಅವಕಾಶ ನೀಡಬಾರದು. ಜಾನುವಾರುಗಳ ಸಾಗಾಣಿಕೆಯನ್ನು ಮಾಡಲು ರಾತ್ರಿ 8 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು. ಬೇಸಿಗೆಯಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೂ ಸಹ ಸಾಗಾಣಿಕೆಯನ್ನು ನಿರ್ಭಂಧಿಸಲಾಗಿದೆ ಎಂದರು. ಈ ಕಾಯ್ದೆ ವ್ಯಾಪ್ತಿಯಲ್ಲಿ ಹಸು, ಕರು ಮತ್ತು ಹೋರಿಗಳು ಸೇರಿವೆ. 13 ವರ್ಷದೊಳಗಿನ ಎಮ್ಮೆ ಹಾಗೂ ಕೋಣಗಳನ್ನು ಸಹ ಒಳಗೊಂಡಿರುತ್ತದೆ ಎಂದು ತಿಳಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *