Connect with us

KARNATAKA

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೊಂಕು

ಬೆಂಗಳೂರು ಅಗಸ್ಟ್ 9: ಆರೋಗ್ಯ ಸಚಿವ ಶ್ರೀರಾಮುಲು ಕೊರೊನಾ ಸೊಂಕು ತಗುಲಿದೆ. ಈ ಕುರಿತಂತೆ ಟ್ವೀಟರ್ ನಲ್ಲಿ ಮಾಹಿತಿ ನೀಡಿದ ಸಚಿವ ಶ್ರೀರಾಮುಲು ಜ್ವರದ ಹಿನ್ನಲೆ ಕೊರೊನಾ ಪರಿಕ್ಷೆ ನಡೆಸಿದ್ದರು. ಇಂದು ಅದರ ವರದಿ ಬಂದಿದ್ದು, ಕೊರೊನಾ ಸೊಂಕು ಇರುವುದು ದೃಢಪಟ್ಟಿದೆ.


ಕೊರೊನಾ ಸೊಂಕು ಹಿನ್ನಲೆ ಆಸ್ಪತ್ರೆಗೆ ದಾಖಲಾಗಿರುವ ಶ್ರೀರಾಮುಲು , ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಮನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಶ್ರೀರಾಮುಲು


ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.

ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ.
ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ. ಎಂದು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *