FILM
ವಿವಾದಾತ್ಮಕ ಹೇಳಿಕೆ – ನಟ ಉಪೇಂದ್ರ ಮೇಲೆ ಹಾಕಿದ್ದ ಮತ್ತೊಂದು ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ
ಬೆಂಗಳೂರು ಅಗಸ್ಟ್ 17 : ವಿವಾದಾತ್ಮಕ ಹೇಳಿಕೆ ನೀಡಿದ ನಟ ಉಪೇಂದ್ರ ವಿರುದ್ದ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಾಸಿಕ್ಯೂಷನ್ ಪರವಾಗಿ ಎಸ್‌ಪಿಪಿ – 1 ಬೆಳ್ಳಿಯಪ್ಪ, ಉಪೇಂದ್ರ ಪರ ಹಿರಿಯ ವಕೀಲ ಉದಯ ಹೊಳ್ಳ ವಾದ ಮಂಡನೆ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ನೇರ ಪ್ರಸಾರದ ವೇಳೆ ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆ ಎಫ್‌ಐಆರ್ ದಾಖಲಾಗಿತ್ತು. ಉಪೇಂದ್ರ ಅವರ ಹೇಳಿಕೆಗೆ ರಾಜ್ಯಾದ್ಯಂತ ಹಲವು ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿತ್ತು. ನಟನ ಬಂಧನಕ್ಕೆ ಆಗ್ರಹಿಸಿ ಗೃಹ ಸಚಿವರ ನಿವಾಸಕ್ಕೆ ಬುಧವಾರ ಮುತ್ತಿಗೆ ಯತ್ನವವೂ ನಡೆದಿತ್ತು.