Connect with us

    LATEST NEWS

    ಶಿರೂರು ಮಠ ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ – ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

    ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನನ್ನು ಪೀಠಾಧಿಪತಿಗಳನ್ನಾಗಿ ನೇಮಕ‌ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.


    ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಅವರ ಪೀಠವು ಈ ಆದೇಶವನ್ನು ಹೊರಡಿಸಿದ್ದು, ಪೀಠಾಧಿಪತಿಗಳ ನೇಮಕ ವಿಚಾರದಲ್ಲಿ 800 ವರ್ಷಗಳಿಂದ‌ ನಡೆದುಕೊಂಡು ಬರುತ್ತಿರುವ ಮಠದ ಸಂಪ್ರದಾಯದಲ್ಲಿ ನ್ಯಾಯಾಲಯ ಮಧ್ಯ ಪ್ರವೇಶಿಸುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.


    ಶಿರೂರು ಮಠಕ್ಕೆ ಅಪ್ರಾಪ್ತ ಬಾಲಕನ್ನು ಪೀಠಾಧಿಪತಿಯಾಗಿ ನೇಮಿಸಿರುವುದನ್ನು ಪ್ರಶ್ನಿಸಿ ಲಾತವ್ಯ ಆಚಾರ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪನ್ನು ಇಂದು ಪ್ರಕಟಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply