DAKSHINA KANNADA
ಕರ್ನಾಟಕ ದೇಶದಲ್ಲೇ ಮೊದಲು ಹೊಸ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ರಾಜ್ಯವಾಗಿದೆ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಪುತ್ತೂರು, ಆಗಸ್ಟ್ 30: ಮಾತೃ ಭಾಷೆಗೆ ಪ್ರಾಮುಖ್ಯತೆ ನೀಡುವ ದೃಷ್ಟಿಯಿಂದ ಕೇಂದ್ರ ಸರಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದೆ. ಆಯಾಯ ಪ್ರಾದೇಶಿಕ ಭಾಷೆಯ ಮೂಲಕವೇ ಶಿಕ್ಷಣ ನೀಡುವುದು ಶಿಕ್ಷಣ ನೀತಿಯ ಉದ್ಧೇಶವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ಕಾಲೇಜಿನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾತೃ ಭಾಷೆಯಿಂದಲೇ ವಿಶ್ವದ ಹಲವು ಅಭಿವೃದ್ಧಿ ಹೊಂದಿದ ರಾಷ್ಟ್ರಗಳು ಗುರುತಿಸಿವೆ. ಚೀನಾದ ಚೈನೀಸ್, ಫ್ರಾನ್ಸ್ ಫೆಂಚ್, ಜರ್ಮನಿ ಜರ್ಮನ್ ಹೀಗೆ ಮಾತೃ ಭಾಷೆಯ ಮೂಲಕವೇ ವ್ಯವಹರಿಸುತ್ತಿದೆ.
ಇದೇ ಉದ್ಧೇಶವನ್ನಿಟ್ಟು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ಕರ್ನಾಟಕ ದೇಶದಲ್ಲೇ ಮೊದಲು ಹೊಸ ಶಿಕ್ಷಣ ನೀತಿಯನ್ನು ಅಳವಡಿಸಿಕೊಂಡ ರಾಜ್ಯವಾಗಿದೆ ಎಂದ ಅವರು ಶಿಕ್ಷಣದ ಜೊತೆಗೆ ಕ್ರೀಡೆಗೂ ಹೊಸ ಶಿಕ್ಷಣ ನೀತಿಯಲ್ಲಿ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಹೊಸ ಶಿಕ್ಷಣ ನೀತಿಯ ಸಫಲತೆಗೆ ಜನರ ಸಹಭಾಗಿತ್ವ ಅಗತ್ಯವಾಗಿದೆ ಎಂದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹ ಸರಕಾರ್ಯವಾಹ ಸಿ.ಆರ್. ಮುಕುಂದ್ ಮೊದಲಾದವರು ಉಪಸ್ಥಿತರಿದ್ದರು.