Connect with us

    KARNATAKA

    ಬಿಜೆಪಿ ಶಾಸಕನ ಪುತ್ರನ ಮನೆಯಲ್ಲಿ ಸಿಕ್ತು 6 ಕೋಟಿ ನಗದು…!!

    ಬೆಂಗಳೂರು ಮಾರ್ಚ್ 03: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಮಗ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಬರೋಬ್ಬರಿ 6 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ.


    ಕೆಎಸ್ ಡಿಎಲ್ ಅಧ್ಯಕ್ಷರೂ ಆಗಿರುವ ಬಿಜೆಪಿಯ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಅವರನ್ನು ₹40 ಲಕ್ಷ ಲಂಚ ಪಡೆಯುತ್ತಿದ್ದಾಗ ಗುರುವಾರ ಸಂಜೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಅವರ ಖಾಸಗಿ ಕಚೇರಿಯಲ್ಲಿ ಇನ್ನೂ ₹1.62 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು.


    ಬಳಿಕ ಡಾಲರ್ಸ್ ಕಾಲೋನಿಯ ಪ್ರಶಾಂತ್ ಮನೆಯ ಮೇಲೆ ದಾಳಿಮಾಡಿದ್ದ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದರು. ಮನೆಯಲ್ಲಿ ಸಂಗ್ರಹಿಸಿ ಇರಿಸಿದ್ದ ₹ 6 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

     

    Share Information
    Advertisement
    Click to comment

    You must be logged in to post a comment Login

    Leave a Reply