KARNATAKA
ಬಿಜೆಪಿ ಶಾಸಕನ ಮಗನ ಲಂಚಾವತಾರ – ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ

ಬೆಂಗಳೂರು ಮಾರ್ಚ್ 02:ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲಂಚ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹ 40 ಲಕ್ಷ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ 80 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎಂಬ ಆರೋಪ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಪ್ರಶಾಂತ್ ಮಾಡಲ್ ಇದ್ದ ಖಾಸಗಿ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಮುಂದುವರಿದ ಭಾಗವಾಗಿ ಡಾಲರ್ಸ್ ಕಾಲೋನಿ ನಿವಾಸದಲ್ಲೂ ಲೋಕಾ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ.