LATEST NEWS
ಮಂಗಳೂರು ಚಲೋ ಬೈಕ್ Rally – ಮಂಗಳೂರಿನಲ್ಲಿ ನಿರ್ಬಂಧಕಾಜ್ಞೆ ಜಾರಿ

ಮಂಗಳೂರು ಸೆಪ್ಟೆಂಬರ್ 06: ಮಂಗಳೂರಿನಲ್ಲಿ ನಾಳೆ ಬಿಜೆಪಿ ಯುವ ಮೋರ್ಚಾದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಮಂಗಳೂರು ಚಲೋ ಪ್ರತಿಭಟನಾ ಬೈಕ್ ಜಾಥಾ ನಡೆಯಲಿರುವ ಹಿನ್ನೆಲೆಯಲ್ಲಿ ಮಂಗಳೂರಿನ ದ್ಯಂತ ಪೊಲೀಸ್ ಕಾಯ್ದೆ ಕಲಂ 35 ರ ಅಡಿಯಲ್ಲಿ ನಿರ್ಬಂಧಕಾಜ್ಞೆ ಜಾರಿ ಮಾಡಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಇಂದು ಮುಂಜಾನೆಯಿಂದ ಸೆಪ್ಟೆಂಬರ್ 8ರವರೆಗೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35(3) ರಡಿಯಲ್ಲಿ ನಿರ್ಬಂಧಕಾಜ್ಞೆ ಜಾರಿ ಮಾಡಿ ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್ ಸುರೇಶ್ ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಸಂಘಟನೆಗಳು ಸದಸ್ಯರು ವ್ಯಕ್ತಿಗಳು ಯಾವುದೇ ರೀತಿಯಲ್ಲಿ ಬೈಕ್ ಮತ್ತು ಇತರ ವಾಹನಗಳ ಮೂಲಕ ಜಾಥಾ, ಪಾದಯಾತ್ರೆ, ಮೆರವಣಿಗೆ ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕ ಸಭೆ
ಸಾರ್ವಜನಿಕ ಸಭೆ ನಡೆಸಲು ಬೆಳಿಗ್ಗೆ 11 ರಿಂದ 2 ರವರೆಗೆ ಅನುಮತಿ ನೀಡಲಾಗಿದೆ. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಸಲು ಅನುಮತಿ ನೀಡಲಾಗುವುದು. ಆದರೆ ಯಾವುದೇ Rally ನಡೆಸಲು ಅನುಮತಿ ನೀಡುವುದಿಲ್ಲ ಎಂದು ಮಂಗಳೂರು ಪೊಲೀಸ್ ಕಮೀಷನರ್ ತಿಳಿಸಿದ್ದಾರೆ.