ಬೆಂಗಳೂರು ಎಪ್ರಿಲ್ 20: ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ವಿರುದ್ಧ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ (DCRE) ಎಸ್ಪಿ ಕಾಶಿನಾಥ್ ಅವರು ಡಿಜಿಪಿ ಸಲೀಂ ಅವರಿಗೆ ಗಂಭೀರ ಆರೋಪಗಳಿರುವ ಪತ್ರ ಬರೆದು ದೂರು ನೀಡಿದ್ದಾರೆ.

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರು ತಮಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಮತ್ತು ಕನ್ನಡಿಗ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡು ತಾರತಮ್ಯ ಮಾಡುತ್ತಿದ್ದಾರೆ ಎಂದು ಎಸ್ಪಿ ಕಾಶಿನಾಥ್ ದೂರಿದ್ದಾರೆ. “ನನಗೆ ಕೇವಲ 30 ನಿಮಿಷಗಳ ಕಾಲಾವಕಾಶ ನೀಡಿ, ಈ ಅಧಿಕಾರಿಯ ಕರ್ಮಕಾಂಡಗಳನ್ನು ಬಯಲು ಮಾಡುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿರುವುದು ಸಂಚಲನ ಮೂಡಿಸಿದೆ.ಮಂಗಳೂರುನಲ್ಲಿ ಪ್ರಥಮ ಬಾರಿಗೆ RAS ಬಳಸಿಕೊಂಡು ಮಡ್ ಏಡಿಗಳ ಸಾಕಾಣಿಕೆ
ಹಿರಿಯ ಅಧಿಕಾರಿಗಳು ಹೇಳಿದಂತೆ ಕೇಳದಿದ್ದರೆ ಸರಣಿ ಮೆಮೊಗಳನ್ನು ನೀಡಿ ಕಿರುಕುಳ ನೀಡಲಾಗುತ್ತಿದೆ. ಅನ್ಯಾಯದ ವಿರುದ್ಧ ಹಲವು ಬಾರಿ ಲಿಖಿತ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ಕಾಶಿನಾಥ್ ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಶೀತಲ ಸಮರವು ಸರ್ಕಾರಕ್ಕೆ ಮುಜುಗರ ತಂದಿದ್ದು, ಗೃಹ ಸಚಿವರು ಈ ಕುರಿತು ಮಾಹಿತಿ ಪಡೆದಿದ್ದಾರೆ. ಹಿರಿಯ ಅಧಿಕಾರಿಗಳ ಮಟ್ಟದಲ್ಲಿ ಆಂತರಿಕ ತನಿಖೆ ನಡೆಯುವ ಸಾಧ್ಯತೆಯಿದೆ.