Connect with us

    LATEST NEWS

    ಸಾಮಾಜಿಕ ಜಾಲತಾಣಗಳಲ್ಲಿ ದಕ್ಷಿಣಕನ್ನಡ ಬಿಲ್ಲವ ನೋಟಾ ಅಭಿಯಾನ

    ಸಾಮಾಜಿಕ ಜಾಲತಾಣಗಳಲ್ಲಿ ದಕ್ಷಿಣಕನ್ನಡ ಬಿಲ್ಲವ ನೋಟಾ ಅಭಿಯಾನ

    ಮಂಗಳೂರು ಎಪ್ರಿಲ್ 24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಜಾತಿ ಸಮೀಕರಣದಲ್ಲಿ ರಾಜಕೀಯ ನಡೆಯುತ್ತಿದೆ. ಈ ಹಿಂದಿನ ಚುನಾವಣೆಯಲ್ಲಿ ಜಾತಿವಾರು ಸಮೀಕ್ಷೆಗಳಿಗೆ ರಾಜಕೀಯ ಪಕ್ಷಗಳು ಆದ್ಯತೆ ನೀಡುವುದು ಸಾಮಾನ್ಯವಾಗಿತ್ತು, ಅದು ಕರಾವಳಿಯ ಜಿಲ್ಲೆಯ ಮಟ್ಟಿಗೆ ಒಳಸುಳಿಯಾಗಿ ಕೆಲಸ ಮಾಡುತ್ತಿತ್ತು. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಎಲ್ಲಿಯೂ ಜಾತೀ ಸಮೀಕರಣದ ಬಗ್ಗೆ ಚರ್ಚೆಗಳು ನಡೆಯುತ್ತಿರಲಿಲ್ಲ.

    ಆದರೆ ಈ ಬಾರಿ ಚುನಾವಣೆಯಲ್ಲಿ ಕರಾವಳಿಯಲ್ಲಿ ಜಾತಿ ಲೆಕ್ಕಾಚಾರಗಳು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚು ಕಾಣಿಸಿಕೊಂಡಿದೆ. ಇದು ಪ್ರಮುಖ ರಾಜಕೀಯ ಪಕ್ಷಗಳಿಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

    ಈ ಬಾರಿ ಕರಾವಳಿಯಲ್ಲಿ ಟಿಕೆಟ್ ಹಂಚಿಕೆಯಲ್ಲಿ ತಮ್ಮ ಸಮುದಾಯವನ್ನು ಕಡೆಗಣಿಸಿ, ತಮಗೆ ಅನ್ಯಾಯವಾಗಿದೆ ಎಂಬ ಭಾವನೆಗಳು ವಿವಿಧ ಸಮುದಾಯಗಳಲ್ಲಿ ವ್ಯಾಪಕವಾಗಿ ಕಾಣಿಸಿಕೊಂಡಿದೆ. ಬಹಿರಂಗ ವೇದಿಕೆಗಳಲ್ಲಿ ಈ ವಿಚಾರವಾಗಿ ಚರ್ಚೆಗಳು ನಡೆಯುವ ಹಂತಕ್ಕೂ ಇದು ತಲುಪಿದೆ.

    ಕೆಲವು ಮುಖಂಡರು ಟಿಕೆಟ್ ಹಂಚಿಕೆ ವೇಳೆ ತಮ್ಮ ಸಮುದಾಯಕ್ಕೆ ಪ್ರಾಮುಖ್ಯತೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸಭೆಗಳನ್ನು ನಡೆಸಿ ರಾಜಕೀಯ ಪಕ್ಷಗಳ ವಿರುದ್ದ ಸಮರ ಸಾರಿದ್ದಾರೆ.

    ಈ ನಡುವೆ ತಮ್ಮ ಸಮುದಾಯಕ್ಕೆ ಪ್ರಾಶಸ್ತ್ಯ ನೀಡಿಲ್ಲ ಎಂದು ಕೆಲ ನಾಯಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಪಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply