LATEST NEWS
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮತದಾನ – ಮತ ಚಲಾಯಿಸಿದ ಅಭ್ಯರ್ಥಿಗಳು
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬಿರುಸಿನ ಮತದಾನ – ಮತ ಚಲಾಯಿಸಿದ ಅಭ್ಯರ್ಥಿಗಳು
ಮಂಗಳೂರು ಮೇ 12: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದೆ. ಭಾರಿ ಮಳೆ ಮನ್ಸೂಚನೆ ಹಿನ್ನಲೆಯಲ್ಲಿ ಮತದಾರರ ಬೆಳಿಗ್ಗೆಯಿಂದಲೇ ಮತದಾನದಲ್ಲಿ ತೊಡಗಿದ್ದಾರೆ.
ಈ ನಡುವೆ ಪ್ರಮುಖ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಮತದಾನ ಮಾಡಿದ್ದಾರೆ. ಕೇಂದ್ರ ಸಚಿವರು ರಾಜಕೀಯ ಮುಖಂಡರುಗಳು ಮತದಾನ ಮಾಡಿದ್ದಾರೆ.
ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಹಾಗು ಕಾಂಗ್ರೆಸ್ ಅಭ್ಯರ್ಥಿ ಸಚಿವ ಯು.ಟಿ.ಖಾದರ್ ಮಂಗಳೂರು ಹೊರವಲಯದ ರಂತಡ್ಕ ಸರಕಾರಿ ಶಾಲೆಯಲ್ಲಿರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮುಲ್ಕಿ – ಮೂಡಬಿದ್ರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗು ಶಾಸಕ ಅಭಯಚಂದ್ರ ಜೈನ್ ಮೂಡಬಿದ್ರೆಯ ಮೂಡಬಿದ್ರೆ ಡಿಜೆ ಶಾಲೆಯಲ್ಲಿ ಮತದಾನ ಮಾಡಿದರು. ಮೂಡಬಿದ್ರೆ ಜೈನ ಮಠ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ ಕೂಡ ಡಿ ಜೆ ಶಾಲೆಯ ಕೇಂದ್ರದಲ್ಲಿ ಮೊದಲು ಮತ ಚಲಾಯಿಸಿದರು.
ಹಿರಿಯ ಕಾಂಗ್ರೆಸ್ ನಾಯಕ ಬಿ. ಜನಾರ್ದನ ಪೂಜಾರಿ ಬಂಟ್ವಾಳದಲ್ಲಿ ಮತದಾನ ಮಾಡಿದರು . ಅನಾರೋಗ್ಯದ ನಡುವೆಯೂ ಮತಕೇಂದ್ರಕ್ಕೆ ಆಗಮಿಸಿದ ಜನಾರ್ಧನ ಪೂಜಾರಿ ತಮ್ಮ ಹಕ್ಕು ಚಲಾಯಿಸಿದರು.
ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಮಣ್ಣಗುಡ್ಡ ಸರಕಾರಿ ಶಾಲೆಯಲ್ಲಿ ಮತದಾನ ಚಲಾಯಿಸಿದರು. ಮಂಗಳೂರು ದಕ್ಷಿಣ ಕ್ಷೆತ್ರದ ಕಾಂಗ್ರೆಸ್ ಆಭ್ಯರ್ಥಿ ಶಾಸಕ ಜೆ ಆರ್ ಲೋಬೊ ಕೂಡ ತಮ್ಮ ಮತಚಲಾಯಿಸಿದರು. ನಗರದ ಬೆಂದೂರ್ ನಲ್ಲಿರುವ ಸಂತ ಸೆಬಾಸ್ಟಿನ್ ಶಾಲೆಯ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಚಿವ ಬಿ. ರಮಾನಾಥ್ ರೈ ತಡಂಬಿಲದ ಸೇಕ್ರೆಡ್ ಹಾರ್ಟ್ ಅನುದಾನಿತ ಶಾಲೆಯ ಮತ ಕೇಂದ್ರಕ್ಕೆ ತೆರಳಿ ಮತದಾನ ಮಾಡಿದರು.
ಮುಲ್ಕಿ – ಮೂಡಬಿದ್ರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೊಟ್ಯಾನ್ ಪುತ್ತಿಗೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಹಂಡೇಲ್ ನ ಮತಕೇಂದ್ರ ದಲ್ಲಿ ಮತದಾನ ಮಾಡಿದರು.
ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಜೀವ ಮಠಂದೂರು ಮತ ಚಲಾವಣೆ ಮಾಡಿದರು. ಉಪ್ಪಿನಂಗಡಿ ಹೀರೆಬಂಡಾಡಿ ಶಾಲೆಯಲ್ಲಿ ಸಂಜೀವ ಮಠಂದೂರು ಮತ ಚಲಾಯಿಸಿದರು.
ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂತೋಷ್ ಕುಮಾರ್ ಬೊಳ್ಯಾರ್ ಇಂದು ತಮ್ಮ ಮತ ಚಲಾಯಿಸಿದರು. ಪಾನೆಲ ಹಿರಿಯ ಪ್ರಾಥಮಿಕ ಶಾಲೆಗೆ ತಮ್ಮ ಬೆಂಬಲಿಗರೊಂದಿಗೆ ಆಗಮಿಸಿದ ಸಂತೋಷ ಕುಮಾರ್ ಮತದಾನ ಮಾಡಿದರು.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜಾ ಕುಟುಂಬ ಸಮಾತರಾಗಿ ಬಂದು ಮತ ಚಲಾಯಿಸಿದರು. ಬೆಳ್ತಂಗಟಿಯ ಗರ್ಡಾಡಿ ಶಾಲೆಯಲ್ಲಿ ಹರೀಶ್ ಪೂಂಜಾರ ಮತ್ತು ತಂದೆ ತಾಯಿ ಮತ್ತು ಹೆಂಡತಿ ಜೊತೆ ಬಂದು ಸರತಿ ಸಾಲಿನಲ್ಲಿ ನಿಂತು ಮತಹಾಕಿದರು.
ಬೆಳ್ತಂಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ವಸಂತ ಬಂಗೇರ ತಮ್ಮ ಮತ ಚಲಾಯಿಸಿದರು. ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸಿದ ವಸಂತ್ ಬಂಗೇರಾ ತಮ್ಮ ಹಕ್ಕು ಚಲಾಯಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ದ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ದಂಪತಿ ಮತದಾನ ಮಾಡಿದರು. ಧರ್ಮಸ್ಥಳದ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಮುಂಜಾನೆ ಆಗಮಿಸಿದ ವೀರೇಂದ್ರ ಹೆಗ್ಗಡೆ ದಂಪತಿ ಮತ ಚಲಾವಣೆ ಮಾಡಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಅಂಗಾರ ಹಅಗು ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ಸುಳ್ಯ ಸರಕಾರಿ ಹಿರಿಯ ಪ್ರರ್ಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.
ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ಹಾಗು ಕಾಂಗ್ರೆಸ್ ಅಭ್ಯರ್ಥಿ ಮೊಯ್ದೀನ್ ಬಾವಾ ತಮ್ ಬೆಂಬಲಿಗರೊಂದಿಗೆ ಆಗಮಿಸಿ ಮತ ಚಲಾಯಿಸಿದರು.
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಪುತ್ತೂರಿನ ಹಾರಾಡಿ ಶಾಲೆಯಲ್ಲಿ ಮತ ಚಲಾಯಿಸಿದ ಡಿ.ವಿ.ಎಸ್, ಕುಟುಂಬ ಸಮೇತ ಆಗಮಿಸಿ ಸಾಮಾನ್ಯ ನಾಗರಿಕರಂತೆ ಸರತಿಯಲ್ಲಿ ನಿಂತು ಮತ ಚಲಾಯಿಸಿದರು.