LATEST NEWS
ಬೆಂಗಳೂರು – ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕೆಎಎಸ್ ಅಧಿಕಾರಿ ಪತ್ನಿ
ಬೆಂಗಳೂರು ಮೇ 11: ಕೆಎಎಸ್ ಅಧಿಕಾರಿಯೊಬ್ಬರ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ.
ಮೃತರನ್ನು ಚೈತ್ರಾಗೌಡ ಎಂದು ಗುರುತಿಸಲಾಗಿದೆ. ಮೂರು ಅಂತಸ್ತಿನ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಇವರು ಮನೆಯಲ್ಲಿ ಫ್ಯಾನ್ಗೆ ನೇಣುಬಿಗಿದ ಸ್ಥಿತಿಯಲ್ಲಿ ಶವಪತ್ತೆ ಆಗಿದೆ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಎಂಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮನೆಯಲ್ಲಿ 3 ತಿಂಗಳ ಹಿಂದೆ ಬರೆದಿಟ್ಟಿದ್ದ ನೋಟ್ ಪತ್ತೆ ಆಗಿದೆ. ಇದೇ ಮಾರ್ಚ್ 11ರಂದು ಬರೆದಿದ್ದ ಡೆತ್ ನೋಟ್ ಪತ್ತೆಯಾಗಿದ್ದು, ನನ್ನ ಗಂಡ ಒಳ್ಳೆಯವರು, ಜೀವನ ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಡಿಪ್ರೆಶನ್ನಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಸಾಕಷ್ಟು ಪ್ರಯತ್ನಿಸಿದೆ ಆಗಲಿಲ್ಲ, ಹಾಗಾಗಿ ನನ್ನ ಜೀವನ ಕೊನೆಗೊಳಿಸುತ್ತಿದ್ದೇನೆ. ಮಗು ಚೆನ್ನಾಗಿ ನೋಡಿಕೊಂಡು ಲೈಫ್ ಎಂಜಾಯ್ ಮಾಡಿ. ನಾನು ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಅಂತ ಗೊತ್ತಿದೆ. ಆದ್ರೂ ನನ್ನ ಜೀವನ ಅಂತ್ಯ ಮಾಡುತ್ತಿದ್ದೇನೆ ಎಂದು ಮನೆಯಲ್ಲಿ 3 ತಿಂಗಳ ಹಿಂದೆ ಬರೆದಿಟ್ಟಿದ್ದ ನೋಟ್ ಪತ್ತೆ ಆಗಿದೆ.