Connect with us

    DAKSHINA KANNADA

    kasaragod : ನಿಯಂತ್ರಣ ತಪ್ಪಿ ಕಾರು ಪಲ್ಟಿ, ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು..!

    ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.

    ಸುರತ್ಕಲ್ ಎನ್ ಐ ಟಿ ಕೆ ಯ ವಿದ್ಯಾರ್ಥಿ ರಾಯಚೂರು ನಿವಾಸಿ ಆರಿಬುದ್ದೀನ್ (21) ಮೃತ ದುರ್ದೈವಿಯಾಗಿದ್ದಾರೆ. ಇತರ ಮೂವರು ಗಾಯಗೊಂಡಿದ್ದು ಗಾಯಗೊಂಡವರನ್ನು ಪೂಡಂಕಲ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪ್ರವಾಸಿ ಕೇಂದ್ರವಾದ ರಾಣಿಪುರಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಬಿದ್ದು ಧರೆಗೆ ಬಡಿದಿದೆ. ರಾಜಾಪುರ ಠಾಣೆ ಪೊಲೀಸರು ಅಪಘಾತಕ್ಕೀಡಾದ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply