ಕಾಸರಗೋಡು ಮೇ 03: “ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಅಭಿವೃದ್ಧಿ ಪರ ಆಡಳಿತವನ್ನು ಮೆಚ್ಚಿ ಕೇರಳದ ಜನತೆ ಈ ಬಾರಿ ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ರಾಜ್ಯದಲ್ಲಿ ಎನ್ಡಿಎ ಕನಿಷ್ಠ 10 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ” ಎಂದು ಕಾಸರಗೋಡು ವಿಧಾನಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಅಶ್ವಿನಿ ಎಂ.ಎಲ್. ತಿಳಿಸಿದ್ದಾರೆ.

ನಾಳೆ ಹೊರಬೀಳಲಿರುವ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, “ಕೇರಳದಲ್ಲಿ ಈ ಬಾರಿ ಬಿಜೆಪಿ ಉತ್ತಮ ಸಾಧನೆ ತೋರಲಿದೆ ಎಂದು ಸಮೀಕ್ಷೆಗಳು ಈಗಾಗಲೇ ಭವಿಷ್ಯ ನುಡಿದಿವೆ. ಅದೇ ರೀತಿ ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್ಡಿಎ ಎರಡು ಸ್ಥಾನಗಳನ್ನು ಗೆಲ್ಲಲಿದೆ. ಕಾಸರಗೋಡಿನ ಮತದಾರರು ಬದಲಾವಣೆ ಬಯಸಿದ್ದು, ಎನ್ಡಿಎ ಪರ ನಿಂತಿದ್ದಾರೆ” ಎಂದರು.
ಕಾಸರಗೋಡು ಕ್ಷೇತ್ರದಲ್ಲಿ ನಾನು ಗೆಲುವು ಸಾಧಿಸುತ್ತೇನೆ ಎಂಬ ನಂಬಿಕೆ ನನಗಿದೆ. ಮೋದಿ ಸರ್ಕಾರದ ಜನಪರ ಯೋಜನೆಗಳು ಪ್ರತಿ ಮನೆಗೂ ತಲುಪಿವೆ. ನಾಳೆಯ ಫಲಿತಾಂಶವು ವಿರೋಧ ಪಕ್ಷಗಳ ಟೀಕೆಗಳಿಗೆ ಮತ್ತು ಜನರ ನಿರೀಕ್ಷೆಗಳಿಗೆ ಸ್ಪಷ್ಟವಾದ ಉತ್ತರ ನೀಡಲಿದೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲೆಯಲ್ಲಿ ಈ ಬಾರಿ ರಾಜಕೀಯ ಮೇಲಾಟ ಕುತೂಹಲ ಕೆರಳಿಸಿದ್ದು, ಅಶ್ವಿನಿ ಅವರ ಈ ಹೇಳಿಕೆ ಎನ್ಡಿಎ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದೆ.