Connect with us

    KARNATAKA

    ಕಾಸರಗೋಡು:ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಉಸ್ತಾದ್ ಬಂಧನ..!

    ಕಾಸರಗೋಡು :  ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ  ಆರೋಪಿ ಉಸ್ತಾದ್ ನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.

     

    ದಕ್ಷಿಣ ಕನ್ನಡದ  ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40) ಬಂಧಿತ ಆರೋಪಿಯಾಗಿದ್ದಾನೆ. ಅಬ್ದುಲ್ ಕರೀಂ  ಉಸ್ತಾದ್ ಆಗಿದ್ದು  ಶನಿವಾರ ಈ ಘಟನೆ ನಡೆದಿದೆ. ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ್ಟಾಪ್ ದಾಟಿದ ಕೂಡಲೇ ಆರೋಪಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ್ದಾನೆ.  ವಿದ್ಯಾರ್ಥಿನಿ ಪ್ರತಿಭಟಿಸಿದಾಗ ಇತರ ಪ್ರಯಾಣಿಕರು ಮದ್ಯ ಪ್ರವೇಶಿ  ಆರೋಪಿಯನ್ನು ಹಿಡಿದು ಬದಿಯಡ್ಕ ಪೊಲೀಸರಿಗೆ ಒಪ್ಪಿಸಿದ್ದಾರೆ.  ಆರೋಪಿ ಅಬ್ದುಲ್ ಕರೀಂ ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.  ಆರೋಪಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯದರ್ಶಿ ಅವಿನಾಶ್ ವಿ ರೈ ಒತ್ತಾಯಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply