Connect with us

    LATEST NEWS

    ಉಪ್ಪಳ ಗೇಟ್ ಬಳಿ ಖಾಸಗಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ – ಐವರಿಗೆ ಗಾಯ

    ಕಾಸರಗೋಡು ಮೇ 13: ಉಪ್ಪಳ ಗೇಟ್ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಪ್ರಯಾಣಿಕರು ಇಳಿಯಲು ರಸ್ತೆಬದಿಯಲ್ಲಿ ನಿಂತಿದ್ದ ಬಸ್‌ಗೆ ಕಂಟೈನರ್ ಲಾರಿ ಮತ್ತೊಂದು ವಾಹನವನ್ನು ಹಿಂದಿಕ್ಕಲು ಮುಂದಾದಾಗ ಮುಖಾಮುಖಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.


    ಗಾಯಗೊಂಡವರಲ್ಲಿ ಬಸ್ ಚಾಲಕ ಉಪ್ಪಳ ನಿವಾಸಿ ಅಶ್ರಫ್ ಹಾಗೂ ನಾಲ್ವರು ಪ್ರಯಾಣಿಕರು ಸೇರಿದ್ದಾರೆ. ಬಸ್ಸಿನ ಮುಂಭಾಗದ ಭಾಗಕ್ಕೆ ತೀವ್ರ ಹಾನಿಯಾಗಿದ್ದು, ಬಸ್ಸಿನೊಳಗೆ ಸಿಲುಕಿದ್ದ ಚಾಲಕನನ್ನು ಸ್ಥಳೀಯ ನಿವಾಸಿಗಳು ಸಾಕಷ್ಟು ಪ್ರಯತ್ನದಿಂದ ಹೊರತೆಗೆದರು.
    ಬಸ್ ತಲಪಾಡಿಯಿಂದ ಕಾಸರಗೋಡಿಗೆ ತೆರಳುತ್ತಿದ್ದು, ಲಾರಿ ಮಂಗಳೂರು ಕಡೆಗೆ ಹೋಗುತ್ತಿತ್ತು. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕಾಗಮಿಸಿದ ಮಂಜೇಶ್ವರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

    VIDEO

    Share Information
    Advertisement
    Click to comment

    You must be logged in to post a comment Login

    Leave a Reply