ಕಾಸರಗೋಡು ಮೇ 04: ಭಾರೀ ಕುತೂಹಲದಲ್ಲಿರುವ ಕಾಸರಗೋಡು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅಶ್ವಿನಿ ಎಂಎಲ್ 8ನೇ ಹಂತದ ಮತ ಎಣಿಕೆಯ ನಂತರ ಸಾವಿರಕ್ಕೂ ಅಧಿಕ ಮತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕಾಸರಗೋಡು ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿ ವಿರುದ್ದ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 1226 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.
ಬಿಜೆಪಿಯ ಅತೀ ನೀರಿಕ್ಷಿತ ಕ್ಷೇತ್ರಗಳಲ್ಲಿ ಒಂದಾಗಿರುವ ಕಾಸರಗೋಡು ಕ್ಷೇತ್ರ ಯಾರಿಗೆ ಒಲಿಯಲಿದೆ ಎನ್ನುವುದು ಕಾದು ನೋಡಬೇಕಿದೆ.