DAKSHINA KANNADA
ಕಾಸರಗೋಡು – ಚಾಲಕನ ನಿರ್ಲಕ್ಷದ ಚಾಲನೆಗೆ ರಸ್ತೆ ಮಧ್ಯೆ ಪಲ್ಟಿಯಾದ ಖಾಸಗಿ ಬಸ್

ಕಾಸರಗೋಡು ಎಪ್ರಿಲ್ 22: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೃತಿಕಾ ಎಂಬ ಹೆಸರಿನ ಈ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಇನ್ನೊಂದು ಬಸ್ಸನ್ನು ಓವರ್ ಟೆಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಮಗುಚಿ ಬಿದ್ದಿದೆ. ಅಪಘಾತದ ವೇಳೆ ಬಸ್ಸಿನಲ್ಲಿ ಬೆರಳಣಿಕೆಯಷ್ಟು ಪ್ರಯಾಣಿಕರು ಮಾತ್ರ ಇದ್ದುದ್ದರಿಂದ ಸಂಭಾವ್ಯ ಭಾರೀ ಅಪಾಯ ತಪ್ಪಿದೆ. ಅಗ್ನಿಶಾಮಕ ದಳದ ಸಿಬ್ಬಂದಿ, ನಾಗರಿಕರು ಬಸ್ಸಿನಲ್ಲಿ ಸಿಲುಕಿದ್ದವರನ್ನು ಹೊರತೆಗೆದು ಆಸ್ಪತ್ರೆಗೆ ತಲಪಿಸಿದರು ಅಪಘಾತದ ಹಿನ್ನೆಲೆಯಲ್ಲಿ ಕೆಲ ಸಮಯ ಈ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ಥ ಗೊಂಡಿತ್ತು.
