LATEST NEWS
ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ಕೊರೊನಾ ಲಸಿಕೆಗಾಗಿ ಘರ್ಷಣೆ
ಕಾಸರಗೋಡು ಜುಲೈ 31: ಕೇರಳದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದಂತೆ ಕೊರೊನಾ ವ್ಯಾಕ್ಸಿನ್ ಅಭಾವ ಕಂಡು ಬಂದಿದ್ದು, ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದು ಘರ್ಷಣೆ ನಡೆದಿರುವ ಘಟನೆ ದ.ಕ ಜಿಲ್ಲೆಯ ಗಡಿಭಾಗವಾದ ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿ ನಡೆದಿದೆ.
ಕಾಸರಗೋಡಿನ ಮೊಗ್ರಾಲ್ ಪುತ್ತೂರು ಗ್ರಾಮಪಂಚಾಯತ್ ವ್ಯಾಪ್ತಿಯವರಿಗೆ ಮೊಗ್ರಾಲ್ ಪುತ್ತೂರು ಹೈಯರ್ ಸೆಕಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು, ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು. ಈ ನಡುವೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂದು ಸ್ಥಳೀಯರ ನಡುವೆ ವಾಗ್ವಾದ ಪ್ರಾರಂಭವಾಗಿದ್ದು, ಘರ್ಷಣೆಗೆ ತಿರುಗಿದೆ.
ಬಳಿಕ ಆಗಮಿಸಿದ ಕಾಸರಗೋಡು ಪೊಲೀಸರಿಂದ ಪರಿಸ್ಥಿತಿ ಹತೋಟಿಗೆ ತಂದಿದ್ದು, ಘರ್ಷಣೆಯ ಹಿನ್ನಲೆಯಲ್ಲಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಳಿಸಲಾಗಿತ್ತು, ಬಳಿಕ ಪೊಲೀಸರ ಭದ್ರತೆಯಲ್ಲಿ ವ್ಯಾಕ್ಸಿನ್ ಪುನರಾರಂಭವಾಗಿದೆ. ಈ ಘಟನೆ ನಿನ್ನೆ ನಡೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.