Connect with us

LATEST NEWS

ಕಾಸರಗೋಡು -ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಗಡಿಯಲ್ಲಿ ಮುಕ್ತ ಸಂಚಾರಕ್ಕೆ ಕೇರಳ ಹೈಕೋರ್ಟ್ ಆದೇಶ

ಮಂಗಳೂರು ಸೆಪ್ಟೆಂಬರ್ 19: ಕೇಂದ್ರ ಸರಕಾರದ ಆದೇಶವಿದ್ದರೂ ಅಂತರ್ ರಾಜ್ಯ ಓಡಾಟಕ್ಕೆ ನಿರ್ಬಂಧ ಹೇರಿದ್ದ ಕಾಸರಗೋಡು ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ನಲ್ಲಿ ಹಿನ್ನಡೆಯಾಗಿದ್ದು, ಕೇರಳದ ಅಂತರರಾಜ್ಯ ರಸ್ತೆಗಳಲ್ಲಿ ಸಂಚಾರ ನಿಷೇಧ ತೆರವುಗೊಳಿಸುಂತೆ ಕೇರಳ ಹೈಕೋರ್ಟ್ ತೀರ್ಪು ನೀಡಿದೆ.


ಇದರಿಂದ ದಕ್ಷಿಣಕನ್ನಡ ಹಾಗೂ ಕಾಸರಗೋಡು ಜಿಲ್ಲಾಡಳಿತಗಳ ನಡುವೆ ನಡೆಯುತ್ತಿದ್ದ ಮುಸುಕಿನ ಗುದ್ದಾಟಕಕ್ಕೊ ಕೊನೆಯಾದಂತಾಗಿದ್ದು, ಎಲ್ಲಾ ರಸ್ತೆಗಳು ಸಂಚಾರಕ್ಕೆ ಮುಕ್ತವಾಗಲಿವೆ. ದಕ್ಷಿಣಕನ್ನಡ ಹಾಗೂ ಕಾಸರಗೋಡು ನಡುವನಿ ನಾಲ್ಕು ಅಂತರರಾಜ್ಯ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಕೇರಳ ಹೈಕೋರ್ಟ್ ಕೆಲವು ದಿನಗಳ ಹಿಂದೆ ಆದೇಶಿಸಿತ್ತು. ಇದೀಗ ಗಡಿ ರಸ್ತೆಗಳನ್ನು ಸಂಚಾರಕ್ಕೆ ಮುಕ್ತಗೊಳಿಸುವಂತೆ ಸೂಚಿಸಿದೆ. ಕಾಸರಗೋಡು – ಕರ್ನಾಟಕ ಅಂತರರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ನೀಡುವಂತೆ ಕೋರಿ ಬಿಜೆಪಿಯ ಹೈಕೋರ್ಟ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ಹೊರಡಿಸಿದೆ.


ಕೊರೊನಾ ಲಾಕ್ ಡೌನ್ ಸಂದರ್ಭ ಮುಚ್ಚಲ್ಪಟ್ಟಿದ್ದ ಕಾಸರಗೋಡು – ದಕ್ಷಿಣಕನ್ನಡ ಜಿಲ್ಲಾ ಅಂತರಾರಾಜ್ಯ ಗಡಿ, ಅನ್ಲಾಕ್ ಗಳ ನಂತರವೂ ಮುಕ್ತ ಸಂಚಾರಕ್ಕೆ ಅವಕಾಶ ನೀಡದೇ ನಿರ್ಬಂಧಗಳನ್ನು ಹೇರಿದ್ದವು. ಒಂದು ಹಂತದಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ಮುಕ್ತ ಅವಕಾಶ ನೀಡಿದರೂ ಕಾಸರಗೋಡು ಜಿಲ್ಲಾಡಳಿತ ಮತ್ತೆ ನಿರ್ಬಂಧಗಳನ್ನು ಹೇರಿತ್ತು. ಈ ಹಿನ್ನಲೆ ಕಾಸರಗೋಡು ಬಿಜೆಪಿ ಗಡಿ ಪ್ರದೇಶಗಳಲ್ಲಿ ಕಾಸರಗೋಡು ಜಿಲ್ಲಾಡಳಿತದ ವಿರುದ್ದ ಪ್ರತಿಭಟನೆ ನಡೆಸಿತ್ತು. ಅಲ್ಲದೆ ಕೇರಳ ಹೈಕೋರ್ಟ್ ನಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿತ್ತು.

Facebook Comments

comments