Connect with us

LATEST NEWS

ಕಾಸರಗೋಡು – ಕುಸಿದು ಬಿದ್ದ ಮೇಲ್ಸೇತುವೆ

ಕಾಸರಗೋಡು ಅಕ್ಟೋಬರ್ 29 : ನಿರ್ಮಾಣ ಹಂತದಲ್ಲಿದ್ದ ಮೇಲ್ಸೇತುವೆಯ ಕಾಂಕ್ರೀಟ್ ಸ್ಲ್ಯಾಬ್ ಕುಸಿದು ಬಿದ್ದ ಘಟನೆ ಕಾಸರಗೋಡಿನ ಪೆರಿಯಪೇಟೆ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ಕಾರ್ಮಿಕ ಗಾಯಗೊಂಡಿದ್ದಾನೆ.

ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಜೊತೆ ಮೇಲ್ಸೆತುವೆ ಕಾಮಗಾರಿ ನಡೆಯುತ್ತಿತ್ತು. ಈ ಘಟನೆಯಲ್ಲಿ ಓರ್ವ ಕಾರ್ಮಿಕ ಗಾಯಗೊಂಡಿದ್ದಾರೆ. ಘಟನೆ ಸಂದರ್ಭದಲ್ಲಿ ಐದು ಮಂದಿ ಕಾರ್ಮಿಕರಿದ್ದು, ಉಳಿದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಅವೈಜ್ಞಾನಿಕ ಕಾಮಗಾರಿ ಘಟನೆಗೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಈ ಬಗ್ಗೆ ಬೇಕಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *