ಕಾಶ್ಮೀರದ ಸ್ಥಿತಿಗೆ ತಲುಪಿದ ಶಬರಿಮಲೆ – ನಳಿನ್ ಕುಮಾರ್ ಕಟೀಲ್

ಮಂಗಳೂರು ನವೆಂಬರ್ 21: ಶಬರಿಮಲೆಯಲ್ಲಿ ಸದ್ಯದ ಪರಿಸ್ಥಿತಿ ಕಾಶ್ಮೀರ ಕಣಿವೆಯ ಸ್ಥಿತಿಯ ರೀತಿಯಲ್ಲಿ ಕಾಣಿಸುತ್ತಿದ್ದು, ಶಬರಿಮಲೆಯಲ್ಲಿ ಎಲ್ಲಿ ನೋಡಿದರೂ ಬರೀ ಪೊಲೀಸ್ ಸಿಬ್ಬಂದಿಗಳೇ ಕಾಣಿಸುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಶಬರಿಮಲೆಗೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳಿದ್ದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಂದ್ರನ್ ಬಂಧನ ನಂತರ ಶಬರಿಮಲೆ ಬಿಜೆಪಿ ಸಂಸದ ಕೇರಳ ಪ್ರಬಾರಿ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ಶಬರಿಮಲೆಯಲ್ಲಿ ಪ್ರಸ್ತುತ ಸ್ಥಿತಿಗತಿಗಳ ಕುರಿತು ಅಧ್ಯಯನ ನಡೆಸಿದ್ದಾರೆ.

ಪೊಲೀಸರ ಬಿಗು ಭದ್ರತೆಯ ನಡುವೆ ಶಬರಿಮಲೆಯಲ್ಲಿ ಪ್ರಸ್ತುತ ಸ್ಥಿತಿಗತಿಗಳ ಕುರಿತು ಅವಲೋಕಿಸಿರುವ ಬಿಜೆಪಿ ಸಂಸದ ನಳಿನ್ ಕುಮಾರ್, ರಾಜ್ಯಸಭಾ ಸದಸ್ಯ ಮುರಳೀಧರನ್ ಹಾಗೂ ಬಿಜೆಪಿ ಕೇರಳ ರಾಜ್ಯ ಕಾರ್ಯದರ್ಶಿ ಪದ್ಮಕುಮಾರ್ ಸನ್ನಿಧಾನದ ವರೆಗೂ ತೆರಳಿದ್ದಾರೆ.

ಇಂದು ಮಂಗಳೂರಿನಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ ಶಬರಿಮಲೆಯಲ್ಲಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಶರಣು ಕೂಗುವವರನ್ನು ಪೊಲೀಸರು ಬಂಧಿಸುತ್ತಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ. ಮೇಲ್ನೋಟಕ್ಕೆ ಶಬರಿಮಲೆಯಲ್ಲಿ ಕಾಶ್ಮೀರದ ಸ್ಥಿತಿ ಕಾಣಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಿ ನೋಡಿದರೂ ಪೊಲೀಸರೇ ತುಂಬಿದ್ದಾರೆ. ಅಯ್ಯಪ್ಪ ಭಕ್ತರಿಗಿಂತ ಹೆಚ್ಚು ಪೊಲೀಸರೆ ಕಾಣುತ್ತಾರೆ ಅಯ್ಯಪ್ಪ ಭಕ್ತರು ನಾಲ್ಕು ಮಂದಿ ಒಟ್ಟಿಗೆ ತೆರಳಿದರೂ ವಶಕ್ಕೆ ಪಡೆಯುತ್ತಾರೆ ಎಂದು ನಳಿನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಬರಿಮಲೆಯಲ್ಲಿ ಪ್ರಸ್ತುತ ಸ್ಥಿತಿಗತಿಗಳ ಕುರಿತು ಅಧ್ಯಯನ ವರದಿ ತಯಾರಿಸುವ ಉದ್ದೇಶದಿಂದ ಶಬರಿಮಲೆಗೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಹಾಗು ಕೇರಳ ಸಹ ಪ್ರಭಾರಿ ನಳಿನ್ ಕುಮಾರ್ ಕಟೀ ಲ್ಎರಡು ದಿನದಲ್ಲಿ ಸಮಗ್ರ ವರದಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಲ್ಲಿಸಲಿದ್ದಾರೆ.