LATEST NEWS
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮತ್ತೊಂದು ಕಾಮಗಾರಿ – ಕಟಪಾಡಿ ಜಂಕ್ಷನ್ ಬಳಿ ಓವರ್ ಪಾಸ್

ಉಡುಪಿ ಮೇ 20: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಬಳಿ ವಾಹನ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ “ಓವರ್ ಪಾಸ್” ಮಂಜೂರಾಗಿ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳು ಹಾಗೂ ಸ್ಥಳೀಯ ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಜೊತೆ ಕಟಪಾಡಿ ಜಂಕ್ಷನ್‌ಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

ಬಳಿಕ ಮಾತನಾಡಿದ ಅವರು ಈಗಾಗಲೇ ಉಡುಪಿಯ ಕಲ್ಯಾಣಪುರ ಸಂತೆಕಟ್ಟೆ ಬಳಿ ಓವರ್ ಪಾಸ್ ಕಾಮಗಾರಿ ಹಾಗೂ ಅಂಬಲಪಾಡಿ ಜಂಕ್ಷನ್ ಬಳಿ ಅಂಡರ್ ಪಾಸ್ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ಜೊತೆಗೆ ಮಳೆಗಾಲ ಸಮೀಪಿಸುತ್ತಿರುವುದರಿಂದ ಮುಂದಿನ ಅಕ್ಟೋಬರ್ ತಿಂಗಳಿನಲ್ಲಿ ಕಟಪಾಡಿಯ ಓವರ್ ಪಾಸ್ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದರು.
ಆದರೆ ಈಗಾಗಲೇ ಸಂತೆಕಟ್ಟೆ ಹಾಗೂ ಅಂಬಲಪಾಡಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಇದೀಗ ಮತ್ತೊಂದು ಕಾಮಗಾರಿ ಪ್ರಾರಂಭವಾದರೇ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಮತ್ತೆ ಸಮಸ್ಯೆಯಾಗುವ ಸಾಧ್ಯತೆ ಇದೆ.